
ಗದಗ, 02 ಜನವರಿ (ಹಿ.ಸ.) :
ಆ್ಯಂಕರ್ : 2025-26 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ತಾವೇ ಖುದ್ದಾಗಿ ಗೂಗಲ್ ಪ್ಲೇಸ್ಟೋರ್‌ನಿಂದ “ಹಿಂಗಾರು ರೈತರ ಬೆಳೆ ಸಮೀಕ್ಷೆ 2025” ನ್ನು ಡೌನ್‌ಲೋಡ್ ಮಾಡಿಕೊಂಡು ಬೆಳೆ ವಿವರಗಳನ್ನು ದಾಖಲಿಸಬೇಕಾಗಿದೆ.
ಹೀಗೆ ವಿವರಗಳನ್ನು ದಾಖಲಿಸುವದರಿಂದ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಯೋಜನೆ, ಬೆಳೆ ವಿಮೆ ಯೋಜನೆ, ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ನಷ್ಟ ಪರಿಹಾರ ಪಡೆಯಲು, ಪಹಣಿಯಲ್ಲಿ ಬೆಳೆ ವಿವರಗಳನ್ನು ದಾಖಲಿಸಲು ಮತ್ತು ಬೆಳೆಸಾಲ ಪಡೆಯುವಲ್ಲಿ ರೈತರಿಗೆ ಅನುಕೂಲವಾಗುವದರಿಂದ ಎಲ್ಲ ರೈತರು ಬೆಳೆ ವಿವರಗಳನ್ನು ತ್ವರಿತವಾಗಿ ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ.
ರೈತರು ಬೆಳೆ ವಿವರಗಳನ್ನು ಅಪ್‌ಲೋಡ್ ಮಾಡದಿದ್ದಲ್ಲಿ ಮೇಲೆ ತಿಳಿಸಿದ ಸರ್ಕಾರದ ಯೋಜನೆಗಳ ಲಾಭದಿಂದ ವಂಚಿತರಾಗುವ ಸಾಧ್ಯತೆ ಇರುವುದರಿಂದ ರೈತರು ಇದನ್ನು ಗಂಭೀರವಾಗಿ ಪರಿಗಣಿಸಿ ತುರ್ತಾಗಿ ವಿವರಗಳನ್ನು ದಾಖಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಗ್ರಾಮದ ಖಾಸಗಿ ನಿವಾಸಿಗಳು, ಕಂದಾಯ / ಕೃಷಿ / ತೋಟಗಾರಿಕೆ /ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದು ಹಾಗೂ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ 1800 425 3553 ಗೆ ಕರೆ ಮಾಡಲು ಜಂಟಿ ಕೃಷಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP