
ಬಳ್ಳಾರಿ, 02 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಪ್ರಸಕ್ತ ಸಾಲಿನಿಂದ ನೂತನವಾಗಿ ಆರಂಭಗೊಂಡ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್‍ಗೆ ನೇರ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ ಅವರು ತಿಳಿಸಿದ್ದಾರೆ.
2025-26ನೇ ಸಾಲಿನಿಂದ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ನೂತನವಾಗಿ ಬ್ಯಾಚುಲರ್ ಆಫ್ ಫಿಸಿಯೋಥೆರಪಿ ಕೋರ್ಸ್ ಆರಂಭಕ್ಕೆ ರಾಜ್ಯ ಸರಕಾರದಿಂದ ಅನುಮೋದನೆ ದೊರಕಿದೆ. ಈ ಹಿನ್ನೆಲೆ ಬಿಪಿಟಿ ಕೋರ್ಸ್‍ನ 40 ಸೀಟ್‍ಗಳಿಗೆ ನೇರವಾಗಿ ಅಭ್ಯರ್ಥಿಗಳ ಪ್ರವೇಶಾತಿಗಾಗಿ ಆಹ್ವಾನಿಸಲಾಗಿದೆ.
ಕೋರ್ಸ್‍ಗೆ ಪ್ರವೇಶಾತಿ ಪಡೆಯುವ ಅಭ್ಯರ್ಥಿಗಳು ಕಡ್ಡಾಯವಾಗಿ ದ್ವಿತೀಯ ಪಿಯುಸಿ ವಿಜ್ಞಾನ (ಪಿಸಿಎಂಬಿ) ವಿಭಾಗದಲ್ಲಿ ತೇರ್ಗಡೆ ಹೊಂದಿರಬೇಕು.
ಜನವರಿ 05ರಿಂದ ಜನವರಿ 07ರವರೆಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್