
ಬಳ್ಳಾರಿ, 02 ಜನವರಿ (ಹಿ.ಸ.) :
ಆ್ಯಂಕರ್ : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ನಡೆದ ಗಲಭೆಯ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಸಂಜೆ ಬಳ್ಳಾರಿಗೆ ಆಗಮಿಸಿ, ಶಾಸಕ ಜಿ. ಜನಾರ್ಧನ ರೆಡ್ಡಿ ಮತ್ತು ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಮನೆಗೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ.
ಗುರುವಾರ ಸಂಜೆಯಿಂದ ಪ್ರಾರಂಭವಾಗಿರುವ ಗಲಭೆಯು ಶುಕ್ರವಾರ ನಸುಕಿನವರೆಗೂ ನಡೆದಿದ್ದು, ಓರ್ವ ಯುವಕನ ಹತ್ಯೆ ನಡೆದಿದೆ. ಗಾಳಿಯಲ್ಲಿ ಗುಂಡು ಹಾರಾಟವಾಗಿವೆ. ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಟ್ಟಿದೆ. ಈ ಹಿನ್ನಲೆಯಲ್ಲಿ ಬಿ.ವೈ. ವಿಜಯೇಂದ್ರ ಅವರು ಬಳ್ಳಾರಿಗೆ ಆಗಮಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್