ಸಕಾಲದಲ್ಲಿ ಜನನ, ಮರಣ ಪ್ರಮಾಣ ಪತ್ರ : ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ಕೊಪ್ಪಳ, 02 ಜನವರಿ (ಹಿ.ಸ.) : ಆ್ಯಂಕರ್ : ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ತುಂಬಾ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬ
ಜನನ, ಮರಣ ಪ್ರಮಾಣ ಪತ್ರ ಸಕಾಲದಲ್ಲಿ ಸಿಗಬೇಕು- ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ


ಕೊಪ್ಪಳ, 02 ಜನವರಿ (ಹಿ.ಸ.) :

ಆ್ಯಂಕರ್ : ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ತುಂಬಾ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಹೇಳಿದ್ದಾರೆ.

ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಾಂಖ್ಯಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಾಗರೀಕ ನೋಂದಣಿ ಪದ್ದತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

“ಜನನ ಮರಣ ನೋಂದಣಿ ಅಧಿನಿಯಮಗಳು-1969” ಹಾಗೂ ``ಕರ್ನಾಟಕ ಜನನ ಮರಣ ನೋಂದಣಿ ನಿಯಮಗಳು 1999'' ರನ್ವಯ ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ನಿಗದಿತ ಅವಧಿಯೊಳಗೆ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿ ಮಾಡಲು ಅವಕಾಶವಿದ್ದು, ಆ ಅವಧಿಯೊಳಗೆ ಜನನ ಮರಣ ಮಾಹಿತಿಯು ಸಂಬಂಧಿಸಿದ ತಂತ್ರಾಶದಲ್ಲಿ ದಾಖಲಿಸಬೇಕು.

ಜನನ-ಮರಣ ನೋಂದಣಿಯನ್ನು ಅಧಿನಿಯಮ ಮತ್ತು ನಿಯಮಗಳಂತೆ ಹಾಗೂ 2024ರ ತಿದ್ದುಪಡಿ ನಿಯಮದಂತೆ ಅನುμÁ್ಠನಕ್ಕೆ ಕ್ರಮವಹಿಸಬೇಕು. ಶೇ.100 ರಷ್ಟು ಜನನ, ಮರಣ ಮತ್ತು ನಿರ್ಜೀವ ಜನನಗಳ ಘಟನೆಗಳನ್ನು ನೋಂದಾವಣೆ ಆಗಿರುವ ಬಗ್ಗೆ ಪರಿಶೀಲನೆ ಕೈಗೊಳ್ಳಬೇಕು. ವಿಳಂಭ ನೋಂದಣಿ ಘಟನೆಗಳನ್ನು ತಡೆಯುವ ಬಗ್ಗೆಯೂ ಸಹ ಕ್ರಮ ವಹಿಸಬೇಕು. ಶೇ. 100ರಷ್ಟು ವರದಿ ಸಾಮಥ್ರ್ಯ ಸಾಧಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನನ ಮತ್ತು ಮರಣ ನೋಂದಣಿ ಕಾರ್ಯವನ್ನು ಜಿಲ್ಲೆಯ ಎಲ್ಲಾ ಗ್ರಾಮ ಲೆಕ್ಕಿಗರು, ವೈದ್ಯಾಧಿಕಾರಿಗಳು ಹಾಗೂ ನಗರಸಭೆ ಪೌರಾಯುಕ್ತರು ಸರಿಯಾಗಿ ನಿರ್ವಹಿಸಬೇಕು. ನೋಂದಣಿ ವೇಳೆ ಸೂಕ್ತ ಪರಿಶೀಲನೆ ಕೈಗೊಂಡು ಅದರ ವದಿಯನ್ನು ಸಲ್ಲಿಸಬೇಕು. ವಿಳಂಬ ನೋಂದಣಿ ಘಟನೆಗಳನ್ನು ತಡೆಬೇಕು. ಯಾವುದೇ ದಾಖಲಾತಿ ಬಾಕಿ ಉಳಿಯದಂತೆ ಶೇ.100ರಷ್ಟು ನೋಂದಣಿ ಮಾಡುವಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಕಾಶ ಪಿ. ದೇಶಪಾಂಡೆ ಅವರು ಮಾತನಾಡಿ, ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿರುತ್ತದೆ. 21 ದಿವಸ ಗಳೊಳಗಾಗಿ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿಯನ್ನು ಮಾಡಲಾಗುವುದು. 2024ರ ತಿದ್ದುಪಡಿ ನಿಯಮದಂತೆ ಜನನ ಮರಣ ಹೆಚ್ಚುವರಿ ಪ್ರಮಾಣ ಪತ್ರಗಳ ಶುಲ್ಕವು ಈಗ ರೂ.50 ಆಗಿರುತ್ತದೆ. ವಿಳಂಬ (ತಡ) ನೋಂದಣಿಗೆ ಘಟನೆ ಸಂಭವಿಸಿದ 21 ದಿನಗಳಿಂದ 30 ದಿನದವರೆಗೆ ಶುಲ್ಕ 20 ಆಗಿರುತ್ತದೆ. ಘಟನೆ ಸಂಭವಿಸಿದ 30 ದಿನಗಳ ನಂತರ ಒಂದು ವರ್ಷದವರೆಗೆ ಶುಲ್ಕ ರೂ. 50 ಆಗಿರುತ್ತದೆ. ಗಂಗಾವತಿ ತಾಲ್ಲೂಕಿನಲ್ಲಿ 85 ನೋಂದಣಿ ಘಟಕಗಳು, ಕನಕಗಿರಿ 67, ಕಾರಟಗಿ 36, ಕೊಪ್ಪಳ 180, ಕುಕನೂರು 65, ಕುಷ್ಟಗಿ 197 ಹಾಗೂ ಯಲಬುರ್ಗಾ 101 ಸೇರಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 731 ನೋಂದಣಿ ಘಟಕಗಳಿವೆ. ಇದರಲ್ಲಿ 713 ಗ್ರಾಮಾಂತರ ಮತ್ತು 18 ನಗರ ಪ್ರದೇಶದಲ್ಲಿವೆ ಎಂದರು.

ಜನನ ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯ 2015 ರಿಂದ ಪ್ರಾರಂಭಿಸಲಾಗಿದೆ. ತದನಂತರ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 2018 ರಿಂದ ಸಂಪೂರ್ಣವಾಗಿ ಇ-ಜನ್ಮ ತಂತ್ರಾಂಶದ ಮೂಲಕ ಜನನ ಮರಣ ಘಟನೆಗಳನ್ನು ನೋಂದಣಿ ಮಾಡುವ ಕಾರ್ಯವನ್ನು ಜಿಲ್ಲೆಯಾದ್ಯಂತ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ನೋಂದಣಾಧಿಕಾರಿಗಳು ಅಥವಾ ಉಪನೋಂದಣಾಧಿಕಾರಿಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯೊಂದಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಬೇಕು. ಜನನ ಮರಣ ನೋಂದಣಿ ಘಟಕಗಳ ಪರಿಶೀಲನೆ ಸೆಕ್ಷನ್ 18ರ ಪ್ರಕಾರ ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇಕಡಾ 100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಪರಿಶೀಲನೆಯನ್ನು ಕಂದಾಯ, ನಗರಾಭಿವೃದ್ಧಿ ಅಥವಾ ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ನಡೆಸಬೇಕಾಗಿರುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ ಶೆಟ್ಟಪ್ಪನವರ್, ತಾಲ್ಲೂಕು ಯೋಜನಾಧಿಕಾರಿ ರಾಜಾಸಾಬ ನದಾಫ್, ಜಿಲ್ಲಾ ಸಾಂಖ್ಯಿಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ಎಸ್,ಕೆ., ಸಹಾಯಕ ಸಾಂಖ್ಯಿಕ ಅಧಿಕಾರಿಗಳಾದ ಕಾಮಾಕ್ಷೀ ಪ್ಯಾಟಿ ಹಾಗೂ ಪ್ರವೀಣ ಅಲಕನೂರ ಸೇರಿದಂತೆ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande