ಗ್ರಾಮಗಳ ಸ್ವಚ್ಛತೆ ಆದ್ಯತೆಯಾಗಲಿ : ಶಶಿಕಾಂತ ಶಿವಪೂರೆ
ಹರಪನಹಳ್ಳಿ, 02 ಜನವರಿ (ಹಿ.ಸ.) : ಆ್ಯಂಕರ್ : ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಲು ಘನ ತಾಜ್ಯ ನಿರ್ವಹಣಾ ಘಟಕದ ವಾಹನ ಚಾಲಕರು ಮತ್ತು ಸಹಾಯಕ ಮಹಿಳಾ ಸದಸ್ಯರ ಪಾತ್ರ ಪ್ರಮುಖವಾಗಿದ್ದು, ಸ್ವಚ್ಛತಾ ಕಾರ್ಯ ಆದ್ಯತೆಯಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಹೇ
ಗ್ರಾಮಗಳ ಸ್ವಚ್ಛತೆ ಆದ್ಯತೆಯಾಗಲಿ: ಶಶಿಕಾಂತ ಶಿವಪೂರೆ


ಹರಪನಹಳ್ಳಿ, 02 ಜನವರಿ (ಹಿ.ಸ.) :

ಆ್ಯಂಕರ್ : ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡಲು ಘನ ತಾಜ್ಯ ನಿರ್ವಹಣಾ ಘಟಕದ ವಾಹನ ಚಾಲಕರು ಮತ್ತು ಸಹಾಯಕ ಮಹಿಳಾ ಸದಸ್ಯರ ಪಾತ್ರ ಪ್ರಮುಖವಾಗಿದ್ದು, ಸ್ವಚ್ಛತಾ ಕಾರ್ಯ ಆದ್ಯತೆಯಾಗಬೇಕು ಎಂದು ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಅವರು ಹೇಳಿದರು.

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು ಮತ್ತು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಬೆಂಗಳೂರು, ಕಿತ್ತೂರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘ ಹರಪನಹಳ್ಳಿ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಘನ ತಾಜ್ಯ ನಿರ್ವಹಣಾ ಘಟಕದಲ್ಲಿನ ವಾಹನ ಚಾಲಕರಿಗೆ ಹಾಗೂ ಸಹಾಯಕರಾದ ಮಹಿಳಾ ಸದಸ್ಯರಿಗೆ ಜಿಲ್ಲಾ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಮೂರು ದಿನದ ವಸತಿ ಸಹಿತ ಪುನಶ್ಚೇತನ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ವೈಜ್ಞಾನಿಕ ಘನತಾಜ್ಯ ನಿರ್ವಹಣೆ ಮಾಡುವುದರ ಬಗ್ಗೆ ಅರಿವು ಹೊಂದಬೇಕು. ಜೊತೆಗೆ ತೆರಿಗೆ ವಸೂಲಾತಿ ಮಾಡಿ ಹೆಚ್ಚಿನ ಆದಾಯ ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕ ವಿಜಯ್ ಕುಮಾರ್ ಪಿ., ಸಂಪನ್ಮೂಲ ವ್ಯಕ್ತಿಗಳಾದ ಗಣೇಶ್, ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಿನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಗಂಗಾಧರ, ಸೋಮಶೇಖರ್.ಕೆ., ಹಾಗೂ ವಲಯ ಮೇಲ್ವಿಚಾರಕ ಗಂಗಾಧರ ಸ್ವಾಮಿ ಸೇರಿದಂತೆ ಜಿಲ್ಲಾ ಪಂಚಾಯತ್ ನ ಸಿಬ್ಬಂದಿ, ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಿನ ವಾಹನ ಚಾಲಕರು ಹಾಗೂ ಸಹಾಯಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande