
ರಾಯಚೂರು, 02 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷೆ, ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯ ಅವಧಿಯನ್ನು ಜನವರಿ 9ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ,ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು ವಿಳಾಸ: Sevasindhu.karnataka.gov.in. ನಲ್ಲಿ ಜನವರಿ 9ರವರೆಗೆ ಅರ್ಜಿ ಸಲ್ಲಿಸಲು ಕಾಲಾವಾಕಾಶ ನೀಡಲಾಗಿದೆ.
ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್