
ಬಳ್ಳಾರಿ, 02 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ವತಿಯಿಂದ ಅಂತರಾಷ್ಟಿಯ ವಾಣಿಜ್ಯ ಮೇಳ-2026 ರ ಅಂಗವಾಗಿ ‘ಉತ್ಪಾದನೆ ಮೀರಿ ಕೃಷಿ - ರೈತರ ಸಬಲೀಕರಣ’ ಧ್ಯೇಯದೊಂದಿಗೆ ರಾಷ್ಟಿಯ ಆಹಾರ ಭದ್ರತಾ ಮಿಷನ್ ಮತ್ತು ಆತ್ಮ ಯೋಜನೆಯಡಿ ಸಿರಿಧಾನ್ಯಗಳ ಮಹತ್ವ, ಉತ್ಪಾದನೆಯ ನಂತರ ಕೃಷಿ ಸಂಸ್ಕರಣೆ, ಮೌಲ್ಯವರ್ಧನೆ, ಪ್ಯಾಕಿಂಗ್ ಮತ್ತು ಮಾರುಕಟ್ಟೆ ಸಂಪರ್ಕ ಕುರಿತು ರೈತರು, ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜ.04 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದಲ್ಲಿ ತಾಂತ್ರಿಕ ಕಾರ್ಯಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೆ ರೈತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್