
ಬಳ್ಳಾರಿ, 02 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಜ.21, 22 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜ.20 ರಂದು ಸಂಜೆ 07 ಗಂಟೆಗೆ ಬಳ್ಳಾರಿಗೆ ಆಗಮಿಸಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ಜ.21 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ನಂತರ ಮಧ್ಯಾಹ್ನ 03 ಗಂಟೆಗೆ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿ ಕೋಮು ಸೌಹಾರ್ದತೆ, ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದ ಆದೇಶದ ಅನುಷ್ಠಾನ ಮತ್ತು ಜಿಲ್ಲಾ ಪೊಲೀಸ್ ಕಂಪ್ಲೇಂಟ್ ಅಥಾರಿಟಿಯಲ್ಲಿ ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ದೂರುಗಳ ಇತ್ಯರ್ಥದ ಪರಿಶೀಲನೆ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.
ಜ.22 ರಂದು ಬೆಳಿಗ್ಗೆ 10.30 ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತ ಸಮುದಾಯಗಳ ಮುಖಂಡರೊಂದಿಗೆ ಸಭೆ ನಡೆಸುವರು.
ಬಳಿಕ ಮಧ್ಯಾಹ್ನ 03 ಗಂಟೆಗೆ ಅಲ್ಪಸಂಖ್ಯಾತರ ಇಲಾಖೆಯ ಸಂಸ್ಥೆಗಳು, ಉರ್ದು ಶಾಲೆಗಳು, ಅಂಗನವಾಡಿ ಕೇಂದ್ರ ಮತ್ತು ಕೊಳಚೆ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವರು. ನಂತರ ವಾಸ್ತವ್ಯ ಮಾಡುವರು.
ಜ.23 ರಂದು ಬೆಳಿಗ್ಗೆ 09.30 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್