ಕರ ವಸೂಲಿ ಅಭಿಯಾನಕ್ಕೆ ಸೂಚನೆ ನೀಡಿದ ಇಒ
ಗದಗ, 02 ಜನವರಿ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ 13 ಗ್ರಾಮ ಪಂಚಾಯತಿಗಳಲ್ಲಿ ಜನೇವರಿ 7 ರಿಂದ 17 ರವರೆಗೆ ವಿಶೇಷ ಕರವಸೂಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳು ಈ ಅಭಿಯಾನದಲ್ಲಿ ಭಾಗವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಕರವಸೂಲಿ ಮಾಡಿ ಅಭಿಯಾನವ
ಫೋಟೋ


ಗದಗ, 02 ಜನವರಿ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ 13 ಗ್ರಾಮ ಪಂಚಾಯತಿಗಳಲ್ಲಿ ಜನೇವರಿ 7 ರಿಂದ 17 ರವರೆಗೆ ವಿಶೇಷ ಕರವಸೂಲಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳು ಈ ಅಭಿಯಾನದಲ್ಲಿ ಭಾಗವಹಿಸಿ ಹೆಚ್ಚಿನ ಪ್ರಮಾಣದಲ್ಲಿ ಕರವಸೂಲಿ ಮಾಡಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಕಂದಕೂರ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಾತಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಹೆಚ್ಚಿನ ಪ್ರಮಾಣದ ತೆರಿಗೆ ವಸೂಲಿ ಮಾಡುವಂತೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಗದಗ ಮತ್ತು ಉಪಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಗದಗ ರವರು ಸೂಚಿಸಿದ ಪ್ರಯುಕ್ತ ಜನೇವರಿ 7 ರಿಂದ 17 ರವರೆಗೆ ಬೆಳಿಗ್ಗೆ 6 ಗಂಟೆಯಿಂದ ಸಂಜೆಯವರೆಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿ.ದ.ಲೆ. ಸಹಾಯಕರು, ಕರವಸೂಲಿಗಾರರು, ಗಣಕಯಂತ್ರ ನಿರ್ವಾಹಕರು, ವಾಟರ್ ಮ್ಯಾನ್ ಗಳು, ಸಿಪಾಯಿಗಳು ಸೇರಿ ಇತರೆ ಗ್ರಾ.ಪಂ ಸಿಬ್ಬಂದಿಗಳು ಗಂಭೀರವಾಗಿ ಪರಿಗಣಿಸಿ, ಒಂದು ತಂಡವಾಗಿ ಕಾರ್ಯನಿರ್ವಹಿಸಿ, ಅತೀ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡುವ ಮೂಲಕ ಸದರಿ ಕರವಸೂಲಾತಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಸೂಚಿಸಿದ್ದಾರೆ.

ಕರವಸೂಲಿ ಅಭಿಯಾನದಲ್ಲಿ ಆಯಾ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು, ಸಹಾಯ ಪಡೆದು ಸಾರ್ವಜನಿಕರ ಸಹಕಾರದೊಂದಿಗೆ ಎಲ್ಲಾ ಸಿಬ್ಬಂದಿಗಳನ್ನು ಒಗ್ಗೂಡಿಸಿಕೊಂಡು ಕರವಸೂಲಾತಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಗರಿಷ್ಠ ಪ್ರಮಾಣದಲ್ಲಿ ತೆರಿಗೆ ವಸೂಲಿ ಮಾಡುವಂತೆ ಅಭಿಯಾನಕ್ಕೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದ್ದಾರೆ.

ಕಳೆದ 3 ವರ್ಷಗಳಿಂದ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಎಲ್ಲಾ ಆಸ್ತಿಗಳ ಮಾಲೀಕರಿಗೆ ನೋಟೀಸ್ ನೀಡುವುದು. ಮತ್ತು ಸದರಿ ದಿನದಂದು ಬಾಕಿಯಿರುವ ಎಲ್ಲ ತೆರಿಗೆಗಳನ್ನು ವಸೂಲಿ ಮಾಡುವುದು. ಸದರಿ ಮಾಹಿತಿಯು ಪಂಚತಂತ್ರ 2.೦ ತಂತ್ರಾಂಶದಲ್ಲಿ ಲಭ್ಯವಿದ್ದು, ಇವತ್ತೇ ಸದರಿ ಪಟ್ಟಿಯನ್ನು ಪಡೆದುಕೊಂಡು ಸಂಬಂಧಿಸಿದವರಿಗೆ ಇವತ್ತೇ ನೊಟೀಸ್ ಜಾರಿ ಮಾಡಿ ಜನೇವರಿ 17 ರೊಳಗೆ ಕರವಸೂಲಿ ಮಾಡಿಸಬೇಕು ಎಂದು ತಿಳಿಸಿದರು.

ತಮ್ಮ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಟ 200 ಆಸ್ತಿ ಮಾಲೀಕರನ್ನು ಗುರುತಿಸಿ ಅವರಿಗೆ ತಗಾದೆ ನೋಟೀಸ್ ನೀಡುವುದು ಮತ್ತು ಅಭಿಯಾನದ ದಿನದಂದು ಸಂಪೂರ್ಣ ತೆರಿಗೆ ವಸೂಲಿ ಮಾಡಬೇಕು. ತೆರಿಗೆ ಪಾತಿಸದೇ ಬಾಕಿ ಉಳಿಸಿಕೊಂಡಿರುವ ಮೊಬೈಲ್ ಟವರ್ ಕಂಪನಿಗಳಿಗೆ ನೋಟೀಸ್ ಜಾರಿ ಮಾಡಿ ಸಂಪೂರ್ಣ ಮೊತ್ತ ಪಾವತಿಸಿಕೊಳ್ಳುವುದು. ತೆರಿಗೆ ಪಾವತಿ ಬಾಕಿ ಹೊಂದಿರುವ ಅಂಗಡಿ ಮಾಲೀಕರು, ಉದ್ದಿಮೆದಾರರು, ಸರ್ಕಾರಿ ನೌಕರರರಿಗೆ ನೋಟೀಸ್ ನೀಡಿ ಶೇ.1೦೦ ರಷ್ಟು ಬಾಕಿ ವಸೂಲಿ ಮಾಡಬೇಕು ಎಂದು ಸೂಚಿಸಿದ್ದಾರೆ.

ತಾಲೂಕಿನಲ್ಲಿ ತೆರಿಗೆ ವಸೂಲಿ ಪ್ರಮಾಣ ಕಡಿಮೆ ಇರುವ ಕಾರಣ ಜನೇವರಿ 7 ರಿಂದ 17 ರವರೆಗೂ ತಾಲೂಕಿನ 13 ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಕರವಸೂಲಿ ಅಭಿಯಾನ ಹಮ್ಮಿಕೊಳ್ಳಳಾಗಿದೆ. ತೆರಿಗೆ ವಸೂಲಿ ಅಭಿಯಾನದಲ್ಲಿ ಗ್ರಾಮ ಪಂಚಾಯತ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಿ ತೆರಿಗೆ ವಸೂಲಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ಅಭಿಯಾನದ ಸಂದರ್ಭದಲ್ಲಿ ಯಾವುದೇ ಸಿಬ್ಬಂದಿಗಳು ರಜೆ ಪಡೆಯುವಂತಿಲ್ಲ. ಅನಧಿಕೃತವಾಗಿ ಗೈರು ಹಾಜರಾದ ಅಧಿಕಾರಿಗಳು / ಸಿಬ್ಬಂದಿಗಳು ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು‌ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛ ವಾಹಿನಿ ಮತ್ತು ಡಂಗೂರ ಸಾರುವ ಮೂಲಕ ಅಭಿಯಾನದ ಬಗ್ಗೆ ಸಾರ್ವಜನಿಕವಾಗಿ ವ್ಯಾಪಕ ಪ್ರಚಾರ ನೀಡುವುದು. ಸದರಿ ಅಭಿಯಾನದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳನ್ನು ಒಗ್ಗೂಡಿಸಿಕೊಂಡು ಆಯಾ ವಾರ್ಡ್ವಾರು ಸಾರ್ವಜನಿಕರ ಮನವೊಲಿಸಿ ತೆರಿಗೆ ವಸೂಲಿ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ಎರಡನೇ ಶನಿವಾರ ಮತ್ತು ಬಾನುವಾರ ರಜೆ ಮಾಡದೇ ಕರವಸೂಲಿ ಮಾಡಬೇಕು. ಜನೇವರಿ 15 ಮಕರ ಸಂಕ್ರಾಂತಿ ದಿನದಂದು ರಜೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande