ಹಿಂಗಾರು ಬೆಳೆ ಸಮೀಕ್ಷೆಯ ರೈತರ ಆಪ್ ಬಿಡುಗಡೆ
ಬಳ್ಳಾರಿ, 02 ಜನವರಿ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಮೊಬೈಲ್ ಆಪ್‌ನಿಂದ ದಾಖಲಿಸಲು ಆಪ್ ಬಿಡುಗಡೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿ
ಹಿಂಗಾರು ಬೆಳೆ ಸಮೀಕ್ಷೆಯ ರೈತರ ಆಪ್ ಬಿಡುಗಡೆ


ಬಳ್ಳಾರಿ, 02 ಜನವರಿ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರೈತರಿಂದ ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಮೊಬೈಲ್ ಆಪ್‌ನಿಂದ ದಾಖಲಿಸಲು ಆಪ್ ಬಿಡುಗಡೆ ಮಾಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಬೆಳೆ ಸಮೀಕ್ಷೆ ಆಪ್ ಬಿಡುಗಡೆಯಾಗಿರುತ್ತದೆ. ರೈತರು ತಮ್ಮ ಮೊಬೈಲ್‌ನಲ್ಲಿ ಗೂಗಲ್ ಪ್ಲೇಸ್ಟೋರ್‌ನಿಂದ ಬೆಳೆ ಸಮೀಕ್ಷೆ ಹಿಂಗಾರು ಹಂಗಾಮಿನ ಫಾರ್ಮರ್ ಆಪ್ ಕ್ರಾಪ್ ಸರ್ವೇ ರಬಿ 2025 ಆಪ್ ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಕೆಳಗಿನ ಲಿಂಕ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

https://play.google.com/store/apps/details?id=com.csk.farmer23_24.cropsurvey ಬೆಳೆ ಸಮೀಕ್ಷೆ ದತ್ತಾಂಶ ಮಾಹಿತಿಯನ್ನು ಬೆಳೆ ವಿಸ್ತರಣೆ ಎಣಿಕೆ ಕಾರ್ಯದಲ್ಲಿ, ಬೆಳೆ ಕಟಾವು ಪ್ರಯೋಗದಲ್ಲಿ, ಪ್ರಕೃತಿ ವಿಕೋಪ ಸಂದರ್ಭದಲ್ಲಿ, ಬೆಳೆಹಾನಿ ವರದಿ ಸಿದ್ಧಪಡಿಸಲು, ಬೆಳೆ ವಿಮಾ ಯೋಜನೆ, ಬೆಂಬಲ ಬೆಲೆ ಯೋಜನೆ, ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಿಸಲು, ರಾಷ್ಟಿಯ ಹಾಗೂ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಬೆಳೆ ಸಾಲ ಮಂಜೂರು ಮಾಡಲು ಬೆಳೆ ಸಮೀಕ್ಷೆ ಮಾಹಿತಿಯನ್ನು ಉಪಯೋಗಿಸಲಾಗುತ್ತದೆ.

ಜಿಲ್ಲೆಯಲ್ಲಿ 293013 ಬೆಳೆ ತಾಕುಗಳಿದ್ದು, ಮೊಬೈಲ್ ಆಪ್ ನಲ್ಲಿ ಜಿಯೋ ರೆಫೆರೆನ್ಸ್ಡ್ ಅಂಡ್ ಡಿಜಿಟೈಡ್ ಬೆಳೆಗ್ರಾಮ ನಕಾಶೆ ಅಳವಡಿಸಲಾಗಿರುವುದರಿಂದ ಆಯಾ ತಾಕಿನ ಗಡಿ ರೇಖೆಯೊಳಗೆ ಹೋಗಿ ಜಿಪಿಎಸ್ ನಿಖರತೆ ಪಡೆದು ಛಾಯಾಚಿತ್ರದೊಂದಿಗೆ ಬೆಳೆಯ ವಿವರಗಳನ್ನು ಕಡ್ಡಾಯವಾಗಿ ರೈತರು ದಾಖಲು ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande