ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ
ಹೊಸಪೇಟೆ, 02 ಜನವರಿ (ಹಿ.ಸ.) : ಆ್ಯಂಕರ್ : ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ತಿಳಿ
ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ


ಹೊಸಪೇಟೆ, 02 ಜನವರಿ (ಹಿ.ಸ.) :

ಆ್ಯಂಕರ್ : ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಅವರು ತಿಳಿಸಿದ್ದಾರೆ.

ಪಟ್ಟಿಯಲ್ಲಿ ಒಟ್ಟು 3206 ಮತದಾರರು ನೋಂದಣಿಯಾಗಿದ್ದಾರೆ.

ಮತದಾರರ ವಿವರ: ವಿಜಯನಗರ: ಗಂಡು-408 ಹೆಣ್ಣು: 444 ಸೇರಿ ಒಟ್ಟು-852

ಹೂವಿನ ಹಡಗಲಿ: ಗಂಡು-322 ಹೆಣ್ಣು: 126 ಒಟ್ಟು-448, ಹಗರಿಬೊಮ್ಮನಹಳ್ಳಿ: ಗಂಡು-329 ಹೆಣ್ಣು: 135 ಒಟ್ಟು-464, ಕೂಡ್ಲಿಗಿ: ಗಂಡು-251 ಹೆಣ್ಣು: 85 ಒಟ್ಟು-336, ಹರಪನಹಳ್ಳಿ: ಗಂಡು-430 ಹೆಣ್ಣು: 162 ಒಟ್ಟು-592, ಕೊಟ್ಟೂರು: ಗಂಡು-373 ಹೆಣ್ಣು: 141 ಒಟ್ಟು-514 ಒಟ್ಟಾರೆ ವಿಜಯನಗರ ಜಿಲ್ಲೆಯಲ್ಲಿ ಗಂಡು-2113, ಹೆಣ್ಣು-1093 ಸೇರಿ ಒಟ್ಟು 3206 ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಅಂತಿಮ ಮತದಾರರ ಪಟ್ಟಿಯ ಭೌತಿಕ ಪ್ರಕ್ರಿಯೆಯು ಸಂಬಂಧಿಸಿದ ಕ್ಷೇತ್ರದ ವ್ಯಾಪ್ತಿಯ ಎಲ್ಲಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಯವರ ಕಚೇರಿ, ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಆಯಾ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಲಭ್ಯವಿದ್ದು, ಮತದಾರರು ಪರಿಶೀಲಿಸಿಕೊಳ್ಳಬಹುದಾಗಿದೆ.

ಇದನ್ನು ಹೊರತುಪಡಿಸಿಯೂ ಸಹ ಇದೊಂದು ನಿರಂತರ ನೋಂದಣಿ ಪ್ರಕ್ರಿಯೆಯಾಗಿರುವ ಹಿನ್ನೆಲೆಯಲ್ಲಿ, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹ ಮತದಾರರು ಅವಶ್ಯಕ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande