ಹಳಿಯಾಳ ಆರ್‌ಸೆಟಿ ತರಬೇತಿ ; ಅರ್ಜಿ ಆಹ್ವಾನ
ಕೊಪ್ಪಳ, 02 ಜನವರಿ (ಹಿ.ಸ.) : ಆ್ಯಂಕರ್ : ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ(ರಿ) ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಹ್ಯಾಂಡ್ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಂಟಿ0ಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಳಿಯಾಳ ಆರ್‌ಸೆಟಿ ತರಬೇತಿ ; ಅರ್ಜಿ ಆಹ್ವಾನ


ಕೊಪ್ಪಳ, 02 ಜನವರಿ (ಹಿ.ಸ.) :

ಆ್ಯಂಕರ್ : ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆ(ರಿ) ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ ಹ್ಯಾಂಡ್ ಎಂಬ್ರಾಯಿಡರಿ ಮತ್ತು ಫ್ಯಾಬ್ರಿಕ್ ಪೇಂಟಿ0ಗ್ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

18 ರಿಂದ 50 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಮಹಿಳೆಯರಿಗೆ ಜನವರಿ 19 ರಿಂದ 31 ದಿನಗಳ ತರಬೇತಿ ನೀಡಲಾಗುವುದು. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ಕರೆ ಮೂಲಕ ಹಾಗೂ ಬಿಳಿ ಹಾಳೆಯ ಮೇಲೆ ತಮ್ಮ ಹೆಸರು, ವಿಳಾಸ ಬರೆದು ಮೊ.ಸಂ. 9483485489 ಗೆ ವಾಟ್ಸಪ್ ಮಾಡುವ ಮೂಲಕ ಅಥವಾ https://forms.gle/KgvX5fHzQ4Zp3bui7 ಲಿಂಕ್ ಬಳಸಿ ನೋಂದಾಯಿಸಬಹುದು.

ಈ ತರಬೇತಿಯು ಸ್ವ-ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿವೆ. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿ0ದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳ ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಗಳನ್ನು ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ದೂರವಾಣಿ ಸಂಖ್ಯೆ: 9742438790, 9483485489 ಗೆ ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande