
ಬಳ್ಳಾರಿ, 02 ಜನವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಬಿ.ವೆಂಕಟ್ ಸಿಂಗ್ ಅವರು ಜ.03 ರಂದು ಬಳ್ಳಾರಿಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು, ರಾತ್ರಿ ಬಳ್ಳಾರಿಗೆ ಆಗಮಿಸಿ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನಂತರ ಜ.03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಯವರೊಂದಿಗೆ ಏರ್ಪಡಿಸಿರುವ ಮಾಹಿತಿ ಹಕ್ಕು ಕಾಯ್ದೆಯ ಕುರಿತು ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ವಾಸ್ತವ್ಯ ಮಾಡಿ, ಜ.04 ರಂದು ಸಿಂಧನೂರಿಗೆ ಪ್ರಯಾಣಿಸುವರು ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್