
ಬಳ್ಳಾರಿ, 02 ಜನವರಿ (ಹಿ.ಸ.) :
ಆ್ಯಂಕರ್ : ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣದ ಹಿನ್ನಲೆಯಲ್ಲಿ ಬಳ್ಳಾರಿಯಲ್ಲಿ ನಡೆದಿರುವ ಗಲಭೆ ಕುರಿತು ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಪಕ್ಷವು ಪಕ್ಷದ ಮುಖಂಡರ ನಿಯೋಗವನ್ನು ನಿಯೋಜಿಸಿದೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಪತ್ರ ಬರದಿದ್ದು, ಬಳ್ಳಾರಿ ನಗರದಲ್ಲಿ ನಡೆದಿರುವ ಅಹಿತಕರ ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ.
ಬಳ್ಳಾರಿಯಲ್ಲಿ ಉದ್ವಿಗ್ನತೆ ಇದೆ. ಕಾರಣ ಸ್ಥಳೀಯವಾಗಿ ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ನಿಯೋಗದ ಸದಸ್ಯರಿಗೆ ಅವರು ಸೂಚನೆ ನೀಡಿದ್ದಾರೆ.
ಕರ್ನಾಟಕ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ರಾಯಚೂರು ಸಂಸದ ಕುಮಾರ ನಾಯಕ್, ವಿಧಾನಪರಿಷತ್ ಸದಸ್ಯರಾದ ಜಕ್ಕಪ್ಪನವರ್ ಮತ್ತು ಬಾದರ್ಲಿ ಬಸವನಗೌಡ ಅವರು ನಿಯೋಗದ ಸದಸ್ಯರಾಗಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು, ಈ ನಿಯೋಗದ ಸದಸ್ಯರಿಗೆ ಇಂದೇ (ಶುಕ್ರವಾರ) ಬಳ್ಳಾರಿಗೆ ಭೇಟಿ ಮಾಡಿ, ಪರಿಸ್ಥಿತಿಯನ್ನು ಅವಲೋಕಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್