
ಕೊಪ್ಪಳ, 02 ಜನವರಿ (ಹಿ.ಸ.) :
ಆ್ಯಂಕರ್ : ದಿನಾಂಕ : 03-01-2026 ರಂದು ಸಾಯಂಕಾಲ ಸಮಯ 04.00 ಗಂಟೆಗೆ ಜಡೇಗೌಡರ ಮನೆಯಿಂದ ಪ್ರಾರಂಭಗೊಂಡು ಕೋಟೆ ಮಠದಿಂದ ಪಲ್ಲಕ್ಕಿ ಹೊರಟು ಗಡಿಯಾರ ಕಂಬ ವೃತ್ತದಲ್ಲಿ, ಮುದ್ದಾಬಳ್ಳಿಯಿಂದ ಬರುವ ಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯೂ, ಹಲಗೇರಿ ಗ್ರಾಮದ ಸದ್ಭಕ್ತರಾದ ದಿ.ಶ್ರೀವೀರನಗೌಡರು ಪಾಟೀಲರ ಮನೆಯಿಂದ ಬರುವ ಕಳಸ ಹಾಗೂ ಮಂಗಳಾಪೂರದಿಂದ ಬರುವಶ್ರೀ ಗವಿಸಿದ್ಧೇಶ್ವರ ಉತ್ಸವ ಮೂರ್ತಿಯೂ ಜವಾಹರ್ ರಸ್ತೆಯಲ್ಲಿ ಕೂಡಿಕೊಂಡು ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್, ಕವಲೂರು ಓಣಿ, ಸಿದ್ಧೇಶ್ವರ ವೃತ್ತ, ಗವಿಶ್ರೀ ನಗರದ 3ನೇ ಮುಖ್ಯರಸ್ತೆ ಮೂಲಕ 3ನೇ ಅಡ್ಡರಸ್ತೆಯಿಂದ ಶ್ರೀಮಠಕ್ಕೆ ತಲುಪುವುದು.
ಶ್ರೀ ಗವಿಸಿದ್ಧೇಶ್ವರ ಮೂರ್ತಿಯ (ಪಲ್ಲಕ್ಕಿ) ಮೆರವಣಿಗೆಗೆ ಹಿನ್ನಲೆ
ಸಂಸ್ಥಾನಶ್ರೀ ಗವಿಮಠದ 11 ಪೀಠಾಧೀಶರಾಗಿದ್ದ ಜ|| ಗವಿಸಿದ್ದೇಶ್ವರ ಮಹಾಸ್ವಾಮಿಗಳವರು ಶ್ರೀ ಗವಿಮಠಕ್ಕೆ ಆಗಮಿಸುವ ಪೂರ್ವದಲ್ಲಿ ಕೊಪ್ಪಳದ ಜಡೇಗೌಡರ ಮನೆಯಲ್ಲಿ ಲಿಂಗಾನುಷ್ಠಾನ ನಿರತರಾಗಿದ್ದರು. ಶ್ರೀ ಗವಿಮಠಕ್ಕೆ ಬರುವ ಪೂರ್ವದಲ್ಲಿ ಗೌಡರ ಧರ್ಮಪತ್ನಿಯವರಿಗೆ ತಮ್ಮ ಶಿಖೆ (ಜಡೆ)ಯನ್ನೇ ತೆಗೆದುಕೊಟ್ಟರು. ಆಂದಿನಿಂದ ಆ ಮನೆತನಕ್ಕೆ ಜಡೇಗೌಡ್ರ ಎಂಬ ಹೆಸರು ಬಂದಿತು.
ಈ ಕಾರಣಕ್ಕಾಗಿ ಶ್ರೀಮಠದಲ್ಲಿ ಪೂಜೆಗೊಂಡ ಗವಿಸಿದ್ಧೇಶ್ವರ ಮೂರ್ತಿಯನ್ನು ಜಡೇಗೌಡರ ಮನೆಯಲ್ಲಿ ಮೂಹರ್ತಗೊಳಿಸಿ ಪೂಜಾದಿಗಳನ್ನು ಸಲ್ಲಿಸಿದ ತರುವಾಯ ವಾದ್ಯಗಳ ಸಮೇತ ಪಲ್ಲಕ್ಕಿಯನ್ನು ಕೊಪ್ಪಳದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯ ಮುಖಾಂತರ ಶ್ರೀ ಗವಿಮಠಕ್ಕೆ ತರುವದು ಸತ್‍ಸಂಪ್ರದಾಯ.
ಜಡೇಗೌಡರ ಮನೆಯಲ್ಲಿಯೇ ಪೂಜಾದಿಗಳನ್ನು ತೀರಿಸಿಕೊಂಡು ಬಂದ ಗವಿಸಿದ್ಧೇಶ್ವರನನ್ನು ಪುನಃ ಆ ಮನೆಯಿಂದಲೇ ಆಮಂತ್ರಿಸುವ ಹಾಗೂ ಕರೆತರುವ ಹಿನ್ನಲೆಯು ಇದರಲ್ಲಿ ಅಳವಟ್ಟಿದೆ.
ಕಳಸ ಮೆರವಣಿಗೆ:
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ-2026 ಅಂಗವಾಗಿ ಜಾತ್ರೆಯ ಮುನ್ನಾ ಪ್ರತಿವರ್ಷದ ಪದ್ದತಿಯಂತೆ ದಿನಾಂಕ : 03-01-2026 ರಂದು ಸಾಯಂಕಾಲ ಸಮಯ ಸಾಯಂಕಾಲ 4.00 ಗಂಟೆಗೆ ಹಲಗೇರಿ ಗ್ರಾಮದ ಸದ್ಭಕ್ತರಾದ ದಿ.ಶ್ರೀವೀರನಗೌಡರು ಪಾಟೀಲರ ಮನೆಯಿಂದ ಶ್ರೀ ಗವಿಸಿದ್ಧೇಶ್ವರ ರಥದ ಮೇಲಿನ ಕಳಸವು ಸಹಸ್ರಾರು ಭಕ್ತರಾದಿಯಾಗಿ ಕೊಪ್ಪಳದ ಗವಿಮಠಕ್ಕೆ ಬರುತ್ತದೆ.
ಈ ಮೆರವಣಿಗೆಯಲ್ಲಿ ಗ್ರಾಮದ ಸದ್ಭಕ್ತರು ಹಾಗೂ ಗೌಡರ ಮನೆತನದವರು ಪಾಲ್ಗೊಳ್ಳುತ್ತಾರೆ. ಮಾರ್ಗ ಮಧ್ಯದಲ್ಲಿ ಶ್ರೀ ಗವಿಸಿದ್ಧೇಶ್ವರ ಮೂರ್ತಿಯ ಮೆರವಣಿಗೆಯನ್ನು ಕೂಡಿಕೊಳ್ಳುವುದು.
ಹೆಚ್ಚಿನ ಮಾಹಿತಿಗಾಗಿ ಈ ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು -8123932545, 9242181322 ಶ್ರೀ ಗವಿಮಠ ಕೋರಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್