ಕಾರಟಗಿ : ಜ.9 ರಂದು ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ
ಕಾರಟಗಿ, 02 ಜನವರಿ (ಹಿ.ಸ.) : ಆ್ಯಂಕರ್ : ಕಾರಟಗಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯನ್ನು. ಜನವರಿ 9 ರಂದು ಬೆಳಿಗ್ಗೆ 11 ಗಂಟೆಗೆ ಕನಕಗಿರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ
ಕಾರಟಗಿ : ಜ.9 ರಂದು ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ


ಕಾರಟಗಿ, 02 ಜನವರಿ (ಹಿ.ಸ.) :

ಆ್ಯಂಕರ್ : ಕಾರಟಗಿ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆಯನ್ನು. ಜನವರಿ 9 ರಂದು ಬೆಳಿಗ್ಗೆ 11 ಗಂಟೆಗೆ ಕನಕಗಿರಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾಲ್ಲೂಕು ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶಿವರಾಜ ತಂಗಡಗಿ ಅವರು ವಹಿಸಿಕೊಳ್ಳುವರು.

ಆದ್ದರಿಂದ ಸಂಬ0ಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಖುದ್ದಾಗಿ ಹಾಜರಾಗಬೇಕು ಎಂದು ಕಾರಟಗಿ ತಾಲ್ಲೂಕು ಪಂಚಾಯತಿ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande