
ಹೊಸಪೇಟೆ, 02 ಜನವರಿ (ಹಿ.ಸ.) :
ಆ್ಯಂಕರ್ : 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026ರ ಅಂಗವಾಗಿ ಕಾಲ್ನಡಿಗೆ ಜಾಥಾವನ್ನು ಜ.03ರಂದು ಬೆಳಿಗ್ಗೆ 8 ಗಂಟೆಗೆ ಗಾಂಧಿವೃತ್ತದಿಂದ ಪ್ರಾರಂಭಗೊಂಡು ಪುಣ್ಯಮೂರ್ತಿ ವೃತ್ತ, ಕೆ.ಎಸ್.ಆರ್.ಟಿ.ಸಿ. ಬಸ್ ಸ್ಟ್ಯಾಂಡ್, ಡಾ.ಪುನೀತ್ ರಾಜಕುಮಾರ್ ವೃತ್ತ, ಡಾ.ಅಂಬೇಡ್ಕರ ವೃತ್ತ ಸುಮಾರು 2 ಕಿ.ಮೀ. ಮಾರ್ಗವಾಗಿ ಕೊನೆಗೆ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಹಾಗೂ ವಿವಿಧ ಪ್ರಮುಖ ಕಂಪನಿಯ ಪ್ರಮುಖಾಧಿಕಾರಿಗಳು ಹಾಗೂ ಸಾರಿಗೆ ಇಲಾಖೆಯ ಹೆಚ್ಚುವರಿ ಸಾರಿಗೆ ಆಯುಕ್ತರು, ಜಂಟಿ ಸಾರಿಗೆ ಆಯುಕ್ತರು, 600 ರಿಂದ 800 ಕಾಲೇಜು ವಿದ್ಯಾರ್ಥಿಗಳು, ಲಾರಿ, ಲಘು ವಾಹನ, ಟಿಪ್ಪರ್, ಆಟೋ-ಸಂಘಗಳ ಪದಾಧಿಕಾರಿಗಳು, ಸದಸ್ಯರು, ಮಾರಾಟಗಾರರ ಪ್ರತಿನಿಧಿ, ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್