ರಾಜಸ್ಥಾನದಲ್ಲಿ ಭೀಕರ ಅಪಘಾತ ; ಟ್ರೇಲರ್‌ ಹರಿದು ನಾಲ್ವರ ಸಾವು
ಅಪಘಾತ
Accident


ಬಿಕಾನೆರ್, 02 ಜನವರಿ (ಹಿ.ಸ.) :

ಆ್ಯಂಕರ್ : ಗುರುವಾರ ತಡರಾತ್ರಿ ರಾಜಸ್ಥಾನದ ಬಿಕಾನೆರ್ ಜಿಲ್ಲೆಯ ನಪಸರ್ ಪೊಲೀಸ್ ಠಾಣೆ ವ್ಯಾಪ್ತಿಯ ದೇಶ್ನೋಕ್–ನೌರಂಗದೇಸರ್ ರಸ್ತೆಯ ಭಾರತ್‌ಮಾಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಆಟೋರಿಕ್ಷಾ ಹಾಗೂ ಪಿಕಪ್ ವಾಹನಕ್ಕೆ ವೇಗವಾಗಿ ಬಂದ ಟ್ರೇಲರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಒಟ್ಟು ಎಂಟು ಮಂದಿ ಸ್ಥಳದಲ್ಲಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಅಪಘಾತದಲ್ಲಿ ಗಾಯಗೊಂಡಿರುವ ಜೋಧ್‌ಪುರದ ಸಲವಾಸ್ ನಿವಾಸಿ ಇಂದ್ರಾ ಸಿಂಗ್ ಅವರು ಗಾಂಧಿನಗರದಿಂದ ಪ್ರಯಾಣಿಸುತ್ತಿದ್ದರು. ಹೆದ್ದಾರಿಯಲ್ಲಿ ಆಟೋರಿಕ್ಷಾ ಉರುಳಿಬಿದ್ದಿದ್ದರಿಂದ, ಚಾಲಕ ದೀಪವನ್ನು ಬೆಳಗಿಸಿ ನಿಲ್ಲಿಸಿದ್ದ. ಆಟೋರಿಕ್ಷಾವನ್ನು ಎತ್ತಲು ಪ್ರಯತ್ನಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ರೇಲರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಈ ವೇಳೆ ಅಲ್ಲಿ ನಿಂತಿದ್ದ ಇನ್ನೂ ಎರಡು–ಮೂರು ವಾಹನಗಳಿಗೂ ಟ್ರೇಲರ್ ಡಿಕ್ಕಿ ಹೊಡೆದಿದೆ ಎಂದು ತಿಳಿಸಿದ್ದಾರೆ.

ಗಾಯಗೊಂಡ ನಾಲ್ವರನ್ನು ತಕ್ಷಣ ಬಿಕಾನೆರ್‌ನ ಪಿಬಿಎಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಬಿಕಾನೆರ್ ಟ್ರಾಮಾ ಸೆಂಟರ್‌ಗೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ನಪಸರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande