


ಕೊಪ್ಪಳ, 02 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತದ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿಯವರ ಜಯಂತಿಯ ಪ್ರಯುಕ್ತ ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರು ಪುಪ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜದ ಗೌರವಾಧ್ಯಕ್ಷ ಈಶಪ್ಪ ಬಡಿಗೇರ್, ತಾಲೂಕು ಅಧ್ಯಕ್ಷ ದೇವೇಂದ್ರಪ್ಪ ಬಡಿಗೇರ್, ಜಿಲ್ಲಾ ಕಾರ್ಯಾಧ್ಯಕ್ಷ ರುದ್ರಪ್ಪ ಕೆ. ಬಡಿಗೇರ್, ನಿರ್ದೇಶಕರಾದ ದೇವೇಂದ್ರಪ್ಪ, ಮಹಿಳಾ ಅಧ್ಯಕ್ಷರಾದ ಕಾಳಮ್ಮ, ತಾಲೂಕು ಅಧ್ಯಕ್ಷರಾದ ಕಲ್ಲಪ್ಪ ಬಡಿಗೇರ್ ಸೇರಿದಂತೆ ವಿಶ್ವಕರ್ಮ ಸಮಾಜದ ಮುಖಂಡರು ಹಾಜರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್