
ಕೊಪ್ಪಳ, 20 ಜನವರಿ (ಹಿ.ಸ.) :
ಆ್ಯಂಕರ್ : ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 5 ರಿಂದ 7 ರ ವರೆಗೆ 3 ದಿನಗಳ ಕಾಲ ಕೃಷಿ ಮೇಳವನ್ನು ಆಯೋಜಿಸಲಾಗಿದೆ.
ಸಮಗ್ರಕೃಷಿ-ಸ್ವಾವಲಂಬಿ ಕೃಷಿ ಎಂಬ ಘೋಷವಾಕ್ಯದೊಂದಿಗೆ ಕೃಷಿ ಮೇಳ ಆಯೋಜನೆ ಮಾಡಲಾಗಿದ್ದು, ಮೇಳದಲ್ಲಿ ಸಮಗ್ರ ಬೇಸಾಯಕ್ಕೆ ಸೂಕ್ತವಾದ ಬೆಳೆ ಪದ್ದತಿಗಳು, ಸಿರಿಧಾನ್ಯಗಳು ಮತ್ತು ಅವುಗಳ ಮಹತ್ವ, ನೈಸರ್ಗಿಕ ಕೃಷಿ ಮತ್ತು ಸಾವಯವ ಕೃಷಿ, ಮಳೆ ನೀರು ಕೊಯ್ಲು ಮತ್ತು ಅಂತರಜಲ ಮರುಪೂರಣ, ಸುಧಾರಿತ ಕೃಷಿ ಯಂತ್ರೋಪಕರಣ ಹಾಗೂ ಕಿಸಾನ್ ಡ್ರೋನ್ ಬಳಕೆ, ಸಮಗ್ರಕೀಟ, ರೋಗ ಹಾಗೂ ಪೋಷಕಾಂಶಗಳ ನಿರ್ವಹಣೆ, ಹೈಟೆಕ್ ತೋಟಗಾರಿಕೆ, ಫಲಪುಷ್ಪ ಪ್ರದರ್ಶನ, ಜೈವಿಕ ಗೊಬ್ಬರ ಮತ್ತು ಜೈವಿಕ ಕೀಟನಾಶಕಗಳು, ಜೇನು ಸಾಕಾಣಿಕೆ ಹಾಗೂ ಕೀಟ ಪ್ರಪಂಚ, ದ್ವಿದಳ ಧಾನ್ಯಗಳು, ಎಣ್ಣೆಕಾಳು ಮತ್ತು ಹಿಂಗಾರು ಬೆಳೆಗಳ ತಾಂತ್ರಿಕತೆಗಳು, ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನು ಸಾಕಾಣಿಕೆ, ಕೃಷಿಯಲ್ಲಿ ಸ್ವಯಂಚಾಲಿತ ತಂತ್ರಜ್ಞಾನಗಳು, ಕೊಯ್ಲೋತ್ತರ ತಾಂತ್ರಿಕತೆಗಳು, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ, ಇ-ಸ್ಯಾಪ್ ಬೆಳೆ ಸಂರಕ್ಷಣೆ, ನವೀನ ಮಾಹಿತಿ ತಂತ್ರಜ್ಞಾನ, ರೈತರ ಆವಿμÁ್ಕರಗಳು, ವಿಶೇಷ ಸಾಧನೆಗೈದ ರೈತರೊಂದಿಗೆ ಸಂವಾದ, ವಿಜ್ಞಾನಿಗಳಿಂದ ತಾಂತ್ರಿಕ, ಮಾರುಕಟ್ಟೆ ಮಾಹಿತಿ, ರೇμÉ್ಮಕೃಷಿ, ಹವಾಮಾನ ಆಧಾರಿತ ಮತ್ತು ಮಣ್ಣುರಹಿತ ಕೃಷಿ ಬಗ್ಗೆ ಮಾಹಿತಿ ನೀಡಲಾಗುವುದು. ಶ್ರೇಷ್ಠ ಕೃಷಿಕ, ಶ್ರೇಷ್ಠ ಕೃಷಿಮಹಿಳೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮೇಲಿನ ವಿಷಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ರೈತರು ಹಾಗೂ ರೈತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಮೇಳದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ವಿಸ್ತರಣಾ ಮುಂದಾಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್