ಅಕ್ಷಯ್ ಕುಮಾರ್ ಭದ್ರತಾ ಬೆಂಗಾವಲು ಕಾರು–ಆಟೋ ಡಿಕ್ಕಿ ; ತಪ್ಪಿದ ದೊಡ್ಡ ಅಪಘಾತ
ಉಂಟಾಯಿತು
Accident


ಮುಂಬಯಿ, 20 ಜನವರಿ (ಹಿ.ಸ.) :

ಆ್ಯಂಕರ್ : ನಟ ಅಕ್ಷಯ್ ಕುಮಾರ್ ಅವರ ಭದ್ರತಾ ಬೆಂಗಾವಲು ಪಡೆಯ ವಾಹನವು ಮಂಗಳವಾರ ರಸ್ತೆ ಅಪಘಾತಕ್ಕೀಡಾಗಿದೆ. ಅಕ್ಷಯ್ ಕುಮಾರ್ ಅವರು ತಮ್ಮ ಪತ್ನಿ ಟ್ವಿಂಕಲ್ ಖನ್ನಾ ಅವರೊಂದಿಗೆ ವಿಮಾನ ನಿಲ್ದಾಣದಿಂದ ಜುಹುವಿನ ತಮ್ಮ ನಿವಾಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ವೇಗವಾಗಿ ಬರುತ್ತಿದ್ದ ಮರ್ಸಿಡಿಸ್ ಕಾರು ಒಂದು ಆಟೋರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ, ಆಟೋರಿಕ್ಷಾ ನಿಯಂತ್ರಣ ತಪ್ಪಿ ಅಕ್ಷಯ್ ಕುಮಾರ್ ಅವರ ಭದ್ರತಾ ಎಸ್‌ಯುವಿ ಕಾರಿಗೆ ತಾಕಿದುದಾಗಿ ವರದಿಯಾಗಿದೆ.

ಜುಹುವಿನ ಸಿಲ್ವರ್ ಬೀಚ್ ಕೆಫೆ ಸಮೀಪ ಈ ಅಪಘಾತ ಸಂಭವಿಸಿದ್ದು, ಕೆಲ ಸಮಯ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಯಿತು.

ಅಪಘಾತದ ಪರಿಣಾಮವಾಗಿ ಸ್ವಲ್ಪ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಆಸ್ತಿ ನಷ್ಟ ಸಂಭವಿಸಿಲ್ಲ. ಆದರೆ, ಘಟನೆಯಲ್ಲಿ ಒಬ್ಬರಿಗೆ ಸಣ್ಣ ಗಾಯಗಳಾಗಿರುವುದು ತಿಳಿದುಬಂದಿದೆ.

ಅಪಘಾತ ನಡೆದ ತಕ್ಷಣ ಅಕ್ಷಯ್ ಕುಮಾರ್ ಅವರು ಸ್ವತಃ ಕಾರಿನಿಂದ ಇಳಿದು ಗಾಯಾಳುಗಳ ನೆರವಿಗೆ ಧಾವಿಸಿದ್ದು, ಅವರ ಮಾನವೀಯ ನಡೆಗೆ ಸಾಕ್ಷಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಸಂಚಾರವನ್ನು ಪುನಃ ಸರಾಗಗೊಳಿಸಿದರು.

ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande