ಕ್ರೀಡಾ ಇಲಾಖೆ : ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಕೊಪ್ಪಳ, 20 ಜನವರಿ (ಹಿ.ಸ.) : ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು
ಕ್ರೀಡಾ ಇಲಾಖೆ : ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ


ಕೊಪ್ಪಳ, 20 ಜನವರಿ (ಹಿ.ಸ.) :

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡುವ ಯೋಜನೆಯ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಉತ್ತೇಜನ ನೀಡುವ ಸಲುವಾಗಿ ಎನ್.ಐ.ಎಸ್. ಕೋರ್ಸ್ ಮಾಡುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಕ್ರೀಡಾಪಟುಗಳು ಪರಿಶಿಷ್ಟ ಜಾತಿಗೆ ಸೇರಿದ್ದು, ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಲಗತ್ತಿಸಿರಬೇಕು.

ಶೈಕ್ಷಣಿಕ ಶುಲ್ಕ ಮಾರುಪಾವತಿಯನ್ನು ಕರ್ನಾಟಕದ ನಿವಾಸಿಗಳಿಗೆ ಮಾತ್ರ ನೀಡಲಾಗುವುದು. ಶೈಕ್ಷಣಿಕ ಶುಲ್ಕ ವiರುಪಾವತಿಯನ್ನು ಭಾರತೀಯ ಕ್ರೀಡಾ ಪ್ರಾಧಿಕಾರದಿಂದ ನಡೆಸುವ SSix Week Certificate Course, P.G Diploma and M.S.C Sports Coaching ತರಬೇತಿಗಳಿಗೆ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ಪಾವತಿಸಲಾಗುವ ಶುಲ್ಕದ ಸಂಪೂರ್ಣ ಮೊತ್ತವನ್ನು ಮಾತ್ರ ಮರುಪಾವತಿ ಮಾಡಲಾಗುವುದು.

ಸರ್ಕಾರಿ/ಅರೆ ಸರ್ಕಾರಿ ಇಲಾಖೆಗಳಲ್ಲಿ ನೇಮಕಗೊಂಡು ಸೇವೆ ಸಲ್ಲಿಸುತ್ತಿರುವವರು ಈ ಯೋಜನೆಗೆ ಅರ್ಹರಿರುವುದಿಲ್ಲ. ವಿದ್ಯಾರ್ಥಿಗಳು ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಆರ್.ಡಿ. ಸಂಖ್ಯೆಯನ್ನು ಒಳಗೊಂಡ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸತಕ್ಕದ್ದು. ಬ್ಯಾಂಕ್ ಖಾತೆ ಕಡ್ಡಾಯವಾಗಿ ಕ್ರೀಡಾಪಟುವಿನ ಹೆಸರಿನಲ್ಲಿರಬೇಕು.

ಬ್ಯಾಂಕ್ ಪಾಸ್ ಪುಸ್ತಕದ ಮುಖಪುಟವನ್ನು ಲಗತ್ತಿಸಬೇಕು (ಹೆಸರು, ಖಾತೆ ಸಂಖ್ಯೆ ಐ.ಎಫ್‍ಎಸ್.ಸಿ ಸಂಖ್ಯೆ ಇರುವ ಸಂಪೂರ್ಣ ವಿವರಗಳನ್ನೊಳಗೊಂಡ ಪ್ರತಿ). ಪ್ರಸಕ್ತ ಸಾಲಿನಲ್ಲಿ ಪ್ರವೇಶಾತಿ ಹೊಂದಿ ತರಬೇತಿಯನ್ನು ಪಡೆಯುವ ಅಭ್ಯರ್ಥಿಗಳಿಗೆ ಮಾತ್ರ ಶೈಕ್ಷಣಿಕ ಶುಲ್ಕ ಮರುಪಾವತಿಯನ್ನು ನೀಡಲಾಗುವುದು. ಶೈಕ್ಷಣಿಕ ವರ್ಷದ ಶುಲ್ಕ ಪಾವತಿಸಿದ ರಸೀದಿಗಳನ್ನು ಸಂಬಂಧಪಟ್ಟ ಸಂಸ್ಥೆಯವರಿಂದ ದೃಢೀಕರಿಸಿ ಈ ಕಾರ್ಯಾಲಯಕ್ಕೆ ಸಲ್ಲಿಸತಕ್ಕದ್ದು.

ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಕೊಪ್ಪಳ ಇಲ್ಲಿ ಅರ್ಜಿಗಳನ್ನು ಸ್ವೀಕರಿಸಿ, ಭರ್ತಿ ಮಾಡಿ ಜನವರಿ 30 ರೊಳಗೆ ಕಛೇರಿಯ ಅವಧಿಯಲ್ಲಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು, ಹಾಗೂ ನಂತರ ಬಂದಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande