ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಿಗೆ ಬೊಮ್ಮಾಯಿ‌ ಅಭಿನಂದನೆ
ಬೆಂಗಳೂರು, 20 ಜನವರಿ (ಹಿ.ಸ.) : ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆಯಾಗಿರುವ ನಿತಿನ್ ನಬಿನ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ‌ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಕೋರಿರುವ ಅವರು, ಪಕ್ಷ ಹಾಗೂ ದೇಶದ ಭವಿಷ್ಯದ ದೃ
congratulates


ಬೆಂಗಳೂರು, 20 ಜನವರಿ (ಹಿ.ಸ.) :

ಆ್ಯಂಕರ್ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋದವಾಗಿ ಆಯ್ಕೆಯಾಗಿರುವ ನಿತಿನ್ ನಬಿನ್ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ‌ ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಕೋರಿರುವ ಅವರು, ಪಕ್ಷ ಹಾಗೂ ದೇಶದ ಭವಿಷ್ಯದ ದೃಷ್ಟಿಯಿಂದ ಯುವ ನಾಯಕತ್ವದ ಮೇಲೆ ವಿಶ್ವಾಸ ಇಟ್ಟು ಜವಾಬ್ದಾರಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ , ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ನಿರ್ಗಮಿತ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದು, ವಿಶ್ವದಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಪಕ್ಷವನ್ನು ನೂತನ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಇನ್ನಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande