
ಬೆಂಗಳೂರು, 20 ಜನವರಿ (ಹಿ.ಸ.) :
ಆ್ಯಂಕರ್ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು ಈಶ್ವರ ಖಂಡ್ರೆ ಅವರ ಮುಂದಾಳತ್ವದಲ್ಲಿ ಇವನಾರವ ಇವನಾರವ ಇವನಾರವ ಎಂದೆನಿಸದಿರಯ್ಯ ಇವ ನಮ್ಮವ ಇವ ನಮ್ಮವ ಇವ ನಮ್ಮವನೆಂದೆನಿಸಯ್ಯ ಕೂಡಲ ಸಂಗಮ ದೇವ ನಿಮ್ಮ ಮನೆಯ ಮಗನೆಂದೆನಿಸಯ್ಯ ಎನ್ನುವ ಅಣ್ಣ ಬಸವಣ್ಣನವರ ವಚನದ ಆಶಯದಂತೆ ಕವಲು ದಾರಿಯಲ್ಲಿರುವ ಸಮುದಾಯದ ಎಲ್ಲರನ್ನೂ ಒಗ್ಗೂಡಿಸಿಕೊಂಡು ಸಮಾಜದ ಸಂಘಟನೆ ಇನ್ನಷ್ಟು ಗಟ್ಟಿಗೊಳಿಸಿ ಮುನ್ನಡೆಸಿಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa