
ವಿಜಯಪುರ, 20 ಜನವರಿ (ಹಿ.ಸ.) :
ಆ್ಯಂಕರ್ : ಖಾಸಗಿ ಬಸ್‌ಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ನಾಲ್ಕು ಖಾಸಗಿ ಬಸ್ ಗಳಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಇನ್ನೊಂದು ಬಸ್‌ನಿಂದಾಗಿ ಅಪಘಾತ ಸಂಭವಿಸಿದೆ.
ವಿಜಯಪುರ ನಗರದ ಲಲಿತ ಮಹಲ್ ಹೊಟೆಲ್ ಎದುರು ಘಟನೆ ನಡೆದಿದೆ. ಖಾಸಗಿ ಚಾಲಕನಿಗೆ ಗಾಯಗಳಾಗಿದ್ದ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಂಗಳೂರು, ಮುಂಬೈಗೆ ಪ್ರಯಾಣಿಕರನ್ನು ಹೊತ್ತೊಯಲು ನಿಂತಿದ್ದ ಬಸ್ ಗಳ ನಡುವೆ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಲು ಪೊಲೀಸರು ಹರ ಸಾಹಸ ಪಟ್ಟರು. ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande