ಈಡಿಗ ಸಮುದಾಯ ಭವನ ಕಾಮಗಾರಿ ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ
ಶಿವಮೊಗ್ಗ, 20 ಜನವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಈಡಿಗ ಸಮುದಾಯ ಭವನದ ಕಾಮಗಾರಿ ಸ್ಥಳಕ್ಕೆ ಕ್ಷೇತ್ರದ ಶಾಸಕ ಹಾಗೂ ಸಚಿವ ಎಸ್. ಮಧು ಬಂಗಾರಪ್ಪ ಸಮುದಾಯದ ಮುಖಂಡರೊಂದಿಗೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಸ
Visit


ಶಿವಮೊಗ್ಗ, 20 ಜನವರಿ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಈಡಿಗ ಸಮುದಾಯ ಭವನದ ಕಾಮಗಾರಿ ಸ್ಥಳಕ್ಕೆ ಕ್ಷೇತ್ರದ ಶಾಸಕ ಹಾಗೂ ಸಚಿವ ಎಸ್. ಮಧು ಬಂಗಾರಪ್ಪ ಸಮುದಾಯದ ಮುಖಂಡರೊಂದಿಗೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಸ್ಥಳದಲ್ಲಿದ್ದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಶಾಸಕರು, ಬಹು ದಿನಗಳಿಂದ ಸಮುದಾಯದ ಬಾಂಧವರು ನಿರೀಕ್ಷಿಸುತ್ತಿದ್ದ ಈ ಭವನವು ಸುಸಜ್ಜಿತವಾಗಿ ರೂಪುಗೊಳ್ಳುತ್ತಿದ್ದು, ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜಿ ಆಗಬಾರದು ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈಡಿಗ ಸಮುದಾಯ ಭವನದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಗುರಿ ಹೊಂದಲಾಗಿದ್ದು, ಅಗತ್ಯವಿರುವ ಹೆಚ್ಚುವರಿ ಅನುದಾನಕ್ಕೆ ಮನವಿ ಮಾಡಲಾಗಿದೆ. ಕ್ಷೇತ್ರದ ಪ್ರತಿಯೊಂದು ಅಭಿವೃದ್ಧಿ ಕಾರ್ಯವೂ ಪಾರದರ್ಶಕವಾಗಿ ಹಾಗೂ ಜನೋಪಯೋಗಿಯಾಗಿ ನಡೆಯಬೇಕು ಎಂಬುದೇ ನಮ್ಮ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande