
ಧಾರವಾಡ, 20 ಜನವರಿ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾ ಮಾನವ ಅಭಿವೃದ್ಧಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ಗಳ ತಯಾರಿಕೆಯಲ್ಲಿ ಎಲ್ಲ ಇಲಾಖೆಗಳ ಪಾತ್ರ ಅತಿ ಮಹತ್ವದ್ದಾಗಿರುತ್ತದೆ. ಎಲ್ಲಾ ಇಲಾಖೆಗಳು ಪ್ರಸ್ತುತ ಮತ್ತು ಮುಂದಿನ 5 ವರ್ಷಗಳ ದೂರದೃಷ್ಟಿ ಕೋನ ಇಟ್ಟುಕೊಂಡು ನಿಖರವಾದ ವಿಶ್ವಾಸಾರ್ಹ, ವಾಸ್ತಾವಿಕ ಮಾಹಿತಿ ಒದಗಿಸುವುದು ಕರ್ತವ್ಯವಾಗಿರುತ್ತದೆ ಎಂದು ರಾಜ್ಯ ಸಂಪನ್ಮೂಲ ಅಧಿಕಾರಿ ಎಚ್.ಶಶಿಧರ್ ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031 ರ ಕುರಿತು ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು.
ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕುಡಿಯುವ ನೀರು ರೈತರ ಸಮಸ್ಯೆ ಹೀಗೆ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಸೇರಿದಂತೆ ವಿವಿಧ ವಲಯಗಳ ದತ್ತಾಂಶಗಳ ಮಾಹಿತಿ ನೀಡುವಲ್ಲಿ ತಾಂತ್ರಿಕ ಬೆಂಬಲ ಸಂಸ್ಥೆ ಸಹಕಾರ ನೀಡಬೇಕು. ಇಲ್ಲಿ ಸ್ಥಳೀಯ ನೈಸರ್ಗಿಕ ಸಂಪನ್ಮೂಲ ಬಳಕೆಯ ಸಹ ಅಷ್ಟೇ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.
ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಳ ಹಂತದ ಸಮಸ್ಯೆ, ಸವಾಲುಗಳನ್ನು ಪರಿಗಣಿಸಿ ಅದಕ್ಕೆ ಪೂರಕವಾಗಿ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿ ಯೋಜನೆಗಳನ್ನು ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಸಿದ್ದಲ್ಲಿ, ಅದಕ್ಕೆ ಪೂರಕವಾಗಿ ಸರ್ಕಾರ ಮಟ್ಟದಲ್ಲಿ ಯೋಜನೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸಹಕಾರಿಯಾಗಲಿದೆ. ಎಲ್ಲ ಇಲಾಖೆಗಳು ತಮ್ಮ ವ್ಯಾಪ್ತಿಯ ದತ್ತಾಂಶಗಳ ನಿಖರತೆ, ವಾಸ್ತವಾಂಶ ಪರಿಶೀಲಿಸಿ ಸಕಾಲದಲ್ಲಿ ಮಾಹಿತಿ ಸಲ್ಲಿಸಲು ಹಾಗೂ ಸಿಎಮ್‍ಡಿಆರ್ ತಾಂತ್ರಿಕ ಬೆಂಬಲ ಸಂಸ್ಥೆಗೆ ಸಹಕಾರ ನೀಡಬೇಕು ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa