
ಬೆಂಗಳೂರು, 20 ಜನವರಿ (ಹಿ.ಸ.) :
ಆ್ಯಂಕರ್ : ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನವು ಜನವರಿ 22ರಿಂದ 31ರವರೆಗೆ ನಡೆಯಲಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕುರಿತು ವಿಶೇಷ ಚರ್ಚೆ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರ ಭಾಷಣ ನಡೆಯಲಿದ್ದು, ನಂತರ ನರೇಗಾ ಯೋಜನೆಯಲ್ಲಿ ಪ್ರಸ್ತಾಪವಾಗಿರುವ ಬದಲಾವಣೆಗಳು ಹಾಗೂ ಅದರ ಪರಿಣಾಮಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಅಧಿವೇಶನ ಪೂರ್ಣಗೊಂಡ ಬಳಿಕ 2026–27ರ ಆಯವ್ಯಯ (ಬಜೆಟ್) ಸಿದ್ಧತೆಗಳಿಗೆ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದರು.
ಇದೇ ವೇಳೆ ನವದೆಹಲಿಗೆ ಭೇಟಿ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಪಕ್ಷದ ವರಿಷ್ಠರು ಸೂಚನೆ ನೀಡಿದರೆ ನವದೆಹಲಿಗೆ ತೆರಳುತ್ತೇನೆ” ಎಂದು ಹೇಳಿದರು
ಹಿಂದೂಸ್ತಾನ್ ಸಮಾಚಾರ್ / Rakesh Mahadevappa