ಗೃಹ ಆರೋಗ್ಯ ಯೋಜನೆಯಲ್ಲಿ ಒಂದು ಕೋಟಿ ಜನವರ ಆರೋಗ್ಯ ತಪಾಸಣೆ : ಸಚಿವ ದಿನೇಶ್ ಗುಂಡೂರಾವ್
ಗೃಹ ಆರೋಗ್ಯ ಯೋಜನೆಯಲ್ಲಿ ಒಂದು ಕೋಟಿ ಜನವರ ಆರೋಗ್ಯ ತಪಾಸಣೆ ; ಸಚಿವ ದಿನೇಶ್ ಗುಂಡೂರಾವ್
ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ತೀವ್ರ ನಿಘಾ ಘಟಕವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು.


ಕೋಲಾರ ೨೦ ಜನವರಿ (ಹಿ.ಸ) :

ಆ್ಯಂಕರ್ : ರಾಜ್ಯಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ೨೦೦ ಅತ್ಯಾಧುನಿಕ ಡಯಾಲಿಸಿಸ್ ಕೇಂದ್ರಗಳನ್ನು ಸ್ಥಾಪಿಸಿ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೆ ಒಂಬತ್ತು ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಆರೋಗ್ಯ ಯೋಜನೆಯನ್ನು ಕೋಲಾರದಿಂದ ಆರಂಭಿಸಲಾಯಿತು. ರಾಜ್ಯದಲ್ಲಿ ಇದುವರೆಗೂ ಯೋಜನೆಯಲ್ಲಿ ಒಂದು ಕೋಟಿ ಜನರ ಆರೋಗ್ಯ ತಪಾಸಣೆ ನಡೆಸಲಾಗಿದೆ. ರೋಗವನ್ನು ಮೊದಲೇ ಪತ್ತೆಹಚ್ಚಿ ಚಿಕಿತ್ಸೆ ನೀಡಿ ಹಾಗೂ ಪ್ರಾರಂಭಿಕ ಹಂತದಲ್ಲಿ ಚಿಕಿತ್ಸೆ ನೀಡಿದರೆ ರೋಗ ಗುಣಮುಖವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ಕೋಲಾರ ಜಿಲ್ಲೆಯ ಎಸ್ ಎನ್ ಆರ್ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯ ವಿವಿಧ ನೂತನ ಸೌಲಭ್ಯಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕೇವಲ ಒಂದೂವರೆ ವರ್ಷದಲ್ಲಿ ನರಸಾಪುರ ಹೈವೇ ಪಕ್ಕದಲ್ಲಿ ೧೨.೫ ಕೋಟಿ ರೂ ವೆಚ್ಚದಲ್ಲಿ ನರಸಾಪುರ ಸುಸಜ್ಜಿತ ಸಮುದಾಯ ಆರೋಗ್ಯ ಕೇಂzವನ್ನು ಅತ್ಯಾಧುನಿಕ ಶಸ್ತçಚಿಕಿತ್ಸಾ ಕೊಠಡಿ ಹಾಗೂ ಸುಸಜ್ಜಿತ ಸೌಲಭ್ಯದೊಂದಿಗೆ ಸಿದ್ಧಪಡಿಸಿ ಇಂದು ಉದ್ಘಾಟಿಸಲಾಗಿದೆ.

ಎಸ್.ಎನ್.ಆರ್ ಜಿಲ್ಲಾ ಆಸ್ಪತ್ರೆಯಲ್ಲಿ ೧೬.೫ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ತುರ್ತು ನಿಗಾ ಘಟಕ (ಸಿಸಿಯು) ಮತ್ತು ೨೦ ಹಾಸಿಗೆಗಳ ಅತ್ಯಾಧುನಿಕ ಡಯಾಲಿಸಿಸ್ ಘಟಕವನ್ನು ಲೋಕಾರ್ಪಣೆ ಮಾಡಲಾಗಿದೆ. ಆಸ್ಪತ್ರೆಯ ದುರಸ್ತಿ ಕಾರ್ಯಕ್ಕಾಗಿ ಹೆಚ್ಚುವರಿಯಾಗಿ ೧೦ ಕೋಟಿ ರೂ. ಅನುದಾನ ನೀಡಲಾಗಿದೆ. ಮಾಲೂರಿಗೆ ೪೦ ಕೋಟಿ ರೂ. ವೆಚ್ಚದಲ್ಲಿ ನೂತನ ೧೦೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಶೀಘ್ರವೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ. ಮುಳಬಾಗಿಲಿನಲ್ಲಿ ೨೦ ಕೋಟಿ ರೂ. ವೆಚ್ಚದ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂ.ಸಿ.ಎಚ್) ಕೆಲಸ ಪ್ರಗತಿಯಲ್ಲಿದೆ. ಕೆ.ಜಿ.ಎಫ್ ಆಸ್ಪತ್ರೆಯ ಮೇಲ್ದರ್ಜೆಗೆ ೧೦ ಕೋಟಿ ರೂ. ಮೀಸಲಿಡಲಾಗಿದೆ ಎಂದರು.

ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಯುರೋಲಜಿ, ನೆಫ್ರಾಲಜಿ ಸೇರಿದಂತೆ ೯ ಹೊಸ ಸೂಪರ್ ಸ್ಪೆಷಾಲಿಟಿ ಹುದ್ದೆಗಳನ್ನು ಸೃಜಿಸಲಾಗಿದ್ದು, ಜಿಲ್ಲಾ ಮಟ್ಟದಲ್ಲೇ ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ.

ತಾಲ್ಲೂಕು ಆಸ್ಪತ್ರೆಗಳಲ್ಲಿ ರಾತ್ರಿ ವೇಳೆ ಹೆರಿಗೆ ಮತ್ತು ತುರ್ತು ಚಿಕಿತ್ಸೆಗಾಗಿ ಸ್ರೀರೋಗತಜ್ಞರು, ಮಕ್ಕಳ ತಜ್ಞರು ಸೇರಿದಂತೆ ತಜ್ಞ ವೈದ್ಯರ ಮರುಹೊಂದಾಣಿಕೆ ಮಾಡಿ ೨೪ ಗಂಟೆಯೂ ಸೇವೆ ಸಿಗುವಂತೆ ಕ್ರಮ ಕೈಗೊಳ್ಳಲಾಗಿದೆ. ಕೋಲಾರದಿಂದ ಪ್ರಾರಂಭವಾದ ಗೃಹ ಆರೋಗ್ಯ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ ೧ ಕೋಟಿ ಜನರ ತಪಾಸಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ೨.೭೫ ಲಕ್ಷ ಮನೆಗಳಿಗೆ ಭೇಟಿ ನೀಡಿ ಬಿಪಿ, ಶುಗರ್ ಹಾಗೂ ವಿವಿಧ ಕ್ಯಾನ್ಸರ್ ಪತ್ತೆ ಹಚ್ಚುವ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಪ್ರತಿ ಜಿಲ್ಲಾಸ್ಪತ್ರೆಗಳಲ್ಲೂ ಕ್ಯಾನ್ಸರ್ ರೋಗಿಗಳಿಗೆ ಡೇಕೇರ್ ಕೇಮೋಥೆರಪಿ ಕೇಂದ್ರ ತೆರೆಯಲು ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು.

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮತ್ತು ಸ್ಥಳೀಯ ಶಾಸಕರ ಸಹಕಾರ ಶ್ಲಾಘನೀಯ. ಸರ್ಕಾರದ ಹಣ ಸದ್ಬಳಕೆಯಾಗುತ್ತಿದ್ದು, ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನಗರಾಭಿವೃದ್ಧಿ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಮಾತನಾಡಿ ಕೋಲಾರ ಜಿಲ್ಲೆಯ ಇತಿಹಾಸದಲ್ಲೇ ಅಭಿವೃದ್ಧಿ ಪರ್ವ ಆರಂಭವಾಗಿದ್ದು, ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು ೧೦,೦೦೦ ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನವನ್ನು ವಿವಿಧ ಅಭಿವೃದ್ಧಿ ಕೆಲಸಗಳಿಗಾಗಿ ನೀಡಲಾಗಿದೆ. ಜಿಲ್ಲೆಯ ಆರೋಗ್ಯ ಸುಧಾರಣೆಗಾಗಿ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದರು.

ಕೋಲಾರ ಜಿಲ್ಲೆಯ ಆರೋಗ್ಯ ಮೂಲಸೌಕರ್ಯಕ್ಕಾಗಿ ಇಲಾಖೆಯು ನೂರು ಕೋಟಿಗೂ ಅಧಿಕ ಹಣ ವ್ಯಯಿಸಿದೆ. ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ, ಮೆಡಿಕಲ್ ಕಾಲೇಜನ್ನು ಸರ್ಕಾರಿ ವತಿಯಿಂದಲೇ ಸುಮಾರು ೮೦೦ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಬಜೆಟ್ ಅನುಮೋದನೆ ನಿರೀಕ್ಷಿಸಲಾಗಿದೆ.

ಮಾಲೂರು (೪೧ ಕೋಟಿ ರೂ.), ಮುಳಬಾಗಿಲು (೨೦ ಕೋಟಿ ರೂ.) ಸೇರಿದಂತೆ ಜಿಲ್ಲೆಯಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಆರೋಗ್ಯ ಕ್ಷೇಮ ಕೇಂದ್ರಗಳ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದರು.

ನಗರದ ಅಂತರಗ0ಗೆಯಿ0ದ ಕೋಲಾರಮ್ಮನ ಕೆರೆಯವರೆಗೆ ಮಳೆ ನೀರು ಸರಾಗವಾಗಿ ಹರಿಯಲು ೧೦೦ ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಕಾಲುವೆ ನಿರ್ಮಾಣ ಕಾಮಗಾರಿ ೧೫ ದಿನಗಳಲ್ಲಿ ಆರಂಭವಾಗಲಿದೆ. ನಗರದ ರಿಂಗ್ ರೋಡ್ ಅಭಿವೃದ್ಧಿಗೆ ೩ ಕೋಟಿ ರೂ. ನೀಡಲಾಗಿದ್ದು, ಎಪಿಎಂಸಿಗೆ ೧೦೦ ಎಕರೆಗೂ ಅಧಿಕ ಭೂಮಿಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಎತ್ತಿನಹೊಳೆ ಯೋಜನೆಯಡಿ ಮುಂದಿನ ತಿಂಗಳು ಜಿಲ್ಲೆಯ ಕೆರೆಗಳಿಗೆ ಕುಡಿಯುವ ನೀರು ತುಂಬಿಸಲು ಯೋಜನೆ ರೂಪಿಸಲಾಗಿದೆ ಎಂದರು

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಸಚಿವರು, ಜಿಲ್ಲೆಯ ಶೇ. ೯೪ರಷ್ಟು ಜನರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗುತ್ತಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಗಳ ಮೂಲಕ ಬಡವರ ಸಬಲೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೊತ್ತೂರು ಜಿ. ಮಂಜುನಾಥ್, ಸಾರ್ವಜನಿಕ ಜೀವನದಲ್ಲಿ ಜನರು ಪ್ರಮುಖವಾಗಿ ಉತ್ತಮ ಆಸ್ಪತ್ರೆ, ಗುಣಮಟ್ಟದ ಶಿಕ್ಷಣ, ಉದ್ಯೋಗ ಮತ್ತು ರೈತ ಪರ ಯೋಜನೆಗಳನ್ನು ಬಯಸುತ್ತಾರೆ. ಈ ನಾಲ್ಕು ಅಂಶಗಳನ್ನು ಪ್ರಾಮಾಣಿಕವಾಗಿ ತಲುಪಿಸಿದರೆ ಜನಸಾಮಾನ್ಯರಿಗೆ ನೆಮ್ಮದಿ ಸಿಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಅದರಂತೆ ಇಂದು ಕೋಲಾರದಲ್ಲಿ ಸೌಲಭ್ಯಗಳನ್ನು ಲೋಕಾರ್ಪಣೆ ಮಾಡಲಾಗಿದೆ. ನರಸಾಪುರ ಆಸ್ಪತ್ರೆ ಮತ್ತು ಕ್ರಿಟಿಕಲ್ ಕೇರ್ ಯುನಿಟ್ (ಸಿಸಿಯು) ಉದ್ಘಾಟನೆ ಮಾಡಲಾಗಿದೆ. ಕೆಳಮಹಡಿಯಲ್ಲಿ ೧೨ ಬೆಡ್‌ಗಳಿದ್ದು, ಈಗ ಮೇಲ್ಭಾಗದಲ್ಲಿ ಹೊಸದಾಗಿ ೨೦ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ ಸೆಪ್ಟಿಕ್ ಡಯಾಲಿಸಿಸ್‌ಗಾಗಿ ಪ್ರತ್ಯೇಕ ೪ ಬೆಡ್‌ಗಳನ್ನು ಮೀಸಲಿಡಲಾಗಿದೆ ಎಂದರು.

ಕೋಲಾರಕ್ಕೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲು ಆರೋಗ್ಯ ಸಚಿವರಲ್ಲಿ ವಿನಂತಿಸಲಾಗಿದೆ. ನಗರದ ರಸ್ತೆ ಮತ್ತು ಚರಂಡಿ ವ್ಯವಸ್ಥೆಯನ್ನು ಸರಿಪಡಿಸಲು ಕೋಟ್ಯಂತರ ರೂಪಾಯಿಗಳ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು. ಅಂತರಗAಗೆ ಬೆಟ್ಟದಿಂದ ಹರಿದು ಬರುವ ನೀರಿನಿಂದ ಮನೆಗಳಿಗೆ ಆಗುವ ಹಾನಿ ತಪ್ಪಿಸಲು ೯೦ ಕೋಟಿ ರೂ. ವೆಚ್ಚದ ಸ್ಟಾರ್ಮ್ ವಾಟರ್ ಡ್ರೆöÊನ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಶೀಘ್ರವೇ ಪೂಜೆ ನೆರವೇರಿಸಲಾಗುವುದು ಎಂದರು.

ನಗರದ ರಸ್ತೆಗಳಿಗಾಗಿ ಈಗಾಗಲೇ ೫೦ ಕೋಟಿ ರೂ. ಯೋಜನೆ ಸಿದ್ಧವಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ೫೦ ಕೋಟಿ ರೂ. ಮತ್ತು ೨೫ ಕೋಟಿ ರೂ. ಸೇರಿ ಒಟ್ಟು ೧೨೫ ಕೋಟಿ ರೂ. ವಿಶೇಷ ಅನುದಾನವನ್ನು ನಗರದ ಸರ್ವತೋಮುಖ ಅಭಿವೃದ್ಧಿಗೆ ಬಳಸಲಾಗುವುದು. ಯುಜಿಡಿ ಕಾಮಗಾರಿಗಳ ಬಗ್ಗೆ ನ್ಯಾಯಾಲಯದಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿ ಕೆಲಸ ಮುಂದುವರಿಸಲಾಗುವುದು ಎಂದರು.

ತಮ್ಮ ಅವಧಿಯಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ಬಗ್ಗೆ ಪಾರದರ್ಶಕತೆ ಕಾಯ್ದುಕೊಳ್ಳಲಾಗಿದೆ ಎಂದು ಅವರು ಹೇಳಿದರು. ಪ್ರತಿಯೊಂದು ಕೆಲಸದ ವರ್ಕ್ ಆರ್ಡರ್ ಮತ್ತು ಟೆಂಡರ್ ವಿವರಗಳನ್ನು ದಾಖಲೆಗಳ ರೂಪದಲ್ಲಿ ಇಡಲಾಗಿದ್ದು, ಸಾರ್ವಜನಿಕರು ಅಥವಾ ಮಾಧ್ಯಮದವರು ಬಯಸಿದರೆ ಈ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.

ಕೊನೆಯದಾಗಿ, ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಸಹಕಾರದಿಂದ ಕೋಲಾರವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ತಾವು ಸದಾ ಸಿದ್ಧರಿರುವುದಾಗಿ ಅವರು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೋಲಾರ ಲೋಕಸಭಾ ಸದಸ್ಯ ಎಂ. ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್ ಅನಿಲ್ ಕುಮಾರ್ ಹಾಗೂ ಇಂಚರ ಗೋವಿಂದರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕ ಡಾ. ಕೆ. ವಸಂತ್ ಕುಮಾರ್, ಕಾರ್ಯಪಾಲಕ ಇಂಜಿನಿಯರ್ ಎಂ.ಬಿ. ನಾಗರಾಜ್, ಉಪವಿಭಾಗಾಧಿಕಾರಿ ಡಾ.ಮೈತ್ರಿ. ತಜಶೀಲ್ದಾರ್ ನಯನ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಶ್ರೀನಿವಾಸ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು.

ಚಿತ್ರ : ಕೋಲಾರದ ಎಸ್.ಎನ್.ಆರ್. ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಲಾದ ತೀವ್ರ ನಿಘಾ ಘಟಕವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಲೋಕಾರ್ಪಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande