ರಾಸಲೀಲೆ ವಿಡಿಯೋ ವೈರಲ್ ; ಡಿಜಿಪಿ ರಾಮಚಂದ್ರ ರಾವ್ ಅಮಾನತು
ಬೆಂಗಳೂರು, 20 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಅವರನ್ನು ಅಮಾನತುಗೊಳಿಸಿ, ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ. ನಿ
Ramachandra rao


ಬೆಂಗಳೂರು, 20 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಅವರನ್ನು ಅಮಾನತುಗೊಳಿಸಿ, ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ.

ನಿನ್ನೆ ರಾಮಚಂದ್ರ ರಾವ್ 10 ದಿನಗಳ ರಜೆ ಮೇಲೆ ತೆರಳಿದ್ದರು. ಆದರೆ ಪ್ರಕರಣದ ಗಂಭೀರತೆ ಮತ್ತು ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ, ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ. ವಿಚಾರಣೆ ಇನ್ನೂ ಬಾಕಿಯಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣ:

ಪೊಲೀಸ್ ಸಮವಸ್ತ್ರದಲ್ಲೇ ಕಚೇರಿಯಲ್ಲಿ ಕುಳಿತು ಮಹಿಳೆಯೊಬ್ಬರನ್ನು ಅಪ್ಪಿಕೊಂಡು ಮುತ್ತಿಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಡಿವೆ. ಕುರ್ಚಿ ಮೇಲೆ ಕುಳಿತು ಸರಸ ನಡೆಸುತ್ತಿರುವ ಈ ದೃಶ್ಯಗಳು, ಡಿಜಿಪಿ ರಾಮಚಂದ್ರ ರಾವ್ ಅವರ ಗೌರವ ಮತ್ತು ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಧಕ್ಕೆ ತಂದಿವೆ ಎಂಬ ಆರೋಪಗಳು ಕೇಳಿಬಂದಿವೆ.

ಚಿನ್ನ ಕಳ್ಳಸಾಗಣೆ ಪ್ರಕರಣದ ನಂಟು

ಈ ಹಿಂದೆ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ ಆರೋಪದ ಮೇಲೆ ಬಂಧನದಲ್ಲಿರು ನಟಿ ರನ್ಯಾ ರಾವ್ ಮಲತಂದೆಯಾಗಿರುವ ರಾಮಚಂದ್ರರಾವ್, ವಿಮಾನ ನಿಲ್ದಾಣದಲ್ಲಿ ಅವರಿಗೆ ಪ್ರೋಟೋಕಾಲ್ ನೀಡಿದ ವಿಚಾರಕ್ಕೆ ಸಂಬಂಧಿಸಿ ಡಿಜಿಪಿ ಪಾತ್ರದ ಬಗ್ಗೆ ಗೃಹ ಇಲಾಖೆ ತನಿಖೆಗೆ ಆದೇಶಿಸಿತ್ತು.

ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವ ವೇಳೆ ಶಿಷ್ಟಾಚಾರ ದುರ್ಬಳಕೆಯಾಗಿದೆಯೇ, ಇದರಲ್ಲಿ ರಾಮಚಂದ್ರ ರಾವ್ ಅವರ ಕೈವಾಡವಿದೆಯೇ, ಎಂಬ ಅಂಶಗಳ ಕುರಿತು ತನಿಖೆ ನಡೆಯುತ್ತಿರುವ ನಡುವೆಯೇ, ಇದೀಗ ರಾಸಲೀಲೆಯ ವಿಡಿಯೋ ವೈರಲ್ ಆಗಿರುವುದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande