
ಕೊಪ್ಪಳ, 20 ಜನವರಿ (ಹಿ.ಸ.) :
ಆ್ಯಂಕರ್ : ಕಲಬುರಗಿ ರಂಗಾಯಣದ ರೆಪರ್ಟರಿ ಕಲಾವಿದರಿಂದ ರಚಿತವಾದ ಕಾಲಚಕ್ರ ನಾಟಕವು ನಾಳೆ 21 ರಂದು ಸಂಜೆ 6 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಪ್ರದರ್ಶನಗೊಳ್ಳಲಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.
ಹುಲುಗಪ್ಪ ಕಟ್ಟಿಮನಿ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ನಾಟಕದಲ್ಲಿ ವೃದ್ದಾಪ್ಯದ ಸೂಕ್ಷ್ಮ ಸಂವೇದನೆಗಳನ್ನು ಕಲಾವಿದರು ಮನೋಜ್ಞವಾಗಿ ಪ್ರದರ್ಶಿಸುವರು. ಆದ್ದರಿಂದ ಆಸಕ್ತ ಎಲ್ಲಾ ಹಿರಯ ರಂಗಭೂಮಿ ಕಲಾವಿದರು, ಸಾಹಿತಿಗಳು, ಚಿಂತಕರು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಕುಟುಂಬ ವರ್ಗದವರೊಂದಿಗೆ ತಪ್ಪದೇ ಬಂದು ನಾಟಕವನ್ನು ವೀಕ್ಷಿಸಬೇಕು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್