
ಬೆಂಗಳೂರು, 20 ಜನವರಿ (ಹಿ.ಸ.) :
ಆ್ಯಂಕರ್ : ಇಂದು ಬೆಂಗಳೂರಿನಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಚಿವ ಈಶ್ವರ ಖಂಡ್ರೆ ಅವರು ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಆಯ್ಕೆಗೆ ಸಮಿತಿಯ ಎಲ್ಲಾ ಸದಸ್ಯರಿಗೆ ಅವರು ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ಕಳೆದ 13 ವರ್ಷಗಳಿಂದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಇತ್ತೀಚೆಗೆ ಹಿರಿಯ ಉಪಾಧ್ಯಕ್ಷರ ಪ್ರಭಾರ ಹೊಣೆ ನಿಭಾಯಿಸಿದ್ದೇನೆ. ನನ್ನ ತಂದೆ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಆದರ್ಶದಂತೆ ಸಮಾಜದ ಏಳಿಗೆಗಾಗಿ ಶ್ರಮಿಸುವೆ ಎಂದು ಹೇಳಿದರು.
ವೀರಶೈವ–ಲಿಂಗಾಯತ ಸಮಾಜದ ಒಗ್ಗಟ್ಟೇ ಮುಖ್ಯ ಗುರಿಯಾಗಿದ್ದು, ಸಾಮಾಜಿಕ ನ್ಯಾಯ, ಸಮಾನ ಅವಕಾಶಕ್ಕಾಗಿ ಮಹಾಸಭೆಯ ಮೂಲಕ ನಿರಂತರ ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.
ಬೆಂಗಳೂರು ನಗರದಲ್ಲಿ 1,000 ವಿದ್ಯಾರ್ಥಿನಿಯರ ವಸತಿ ನಿಲಯ, ಭವನವಿಲ್ಲದ ಜಿಲ್ಲೆಗಳಲ್ಲಿ ವೀರಶೈವ ಲಿಂಗಾಯತ ಭವನ ನಿರ್ಮಾಣ, ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಪ್ರಮುಖ ಯೋಜನೆಗಳಾಗಿವೆ ಎಂದು ಘೋಷಿಸಿದರು.
1904ರಲ್ಲಿ ಸ್ಥಾಪಿತವಾದ ಮಹಾಸಭೆಯ ಸಮೃದ್ಧ ಪರಂಪರೆಯ ಈ ಸ್ಥಾನದಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ ಎಂದು ಅವರು ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa