
ಧಾರವಾಡ, 20 ಜನವರಿ (ಹಿ.ಸ.) :
ಆ್ಯಂಕರ್ : 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಿನ್ನೆಲೆಯಲ್ಲಿ ಜನವರಿ 25, 2026 ರಂದು ಎಲ್ಲಾ ಸರ್ಕಾರಿ ಕಚೇರಿಗಳು, ಕಾಲೇಜುಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಆಯೋಜಿಸುವಂತೆ ಧಾರವಾಡ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ My India, My Vote – Citizen at the Heart of Indian Democracy ಎಂಬ ಥೀಮ್ ಅಡಿ ದಿನಾಚರಣೆ ನಡೆಯಲಿದ್ದು, ಜನವರಿ 25, 2026ರ ಬೆಳಗ್ಗೆ 11 ಗಂಟೆಗೆ ಅಥವಾ ಕಚೇರಿ ವೇಳೆಯ ಸೂಕ್ತ ಸಮಯದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಬೇಕು. ಕಾರ್ಯಕ್ರಮದ ಛಾಯಾಚಿತ್ರಗಳೊಂದಿಗೆ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ.
ಈ ವಿಶೇಷ ಧ್ಯೇಯವಾಕ್ಯವನ್ನು ಎಲ್ಲಾ ಇಲಾಖೆಗಳ ಅಧಿಕೃತ ಪತ್ರವ್ಯವಹಾರಗಳಲ್ಲಿ ಬಳಸುವಂತೆ ಹಾಗೂ ಅಧಿಕೃತ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ಹಮ್ಮಿಕೊಳ್ಳುವಂತೆ ಪ್ರಭಾರ ಜಿಲ್ಲಾಧಿಕಾರಿಗಳಾಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa