ಫೆ.07ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ
ಚಿತ್ರದುರ್ಗ, 20 ಜನವರಿ (ಹಿ.ಸ.) : ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯ 2026-27ನೇ ಸಾಲಿನ 9 ಮತ್ತು 11ನೇ ತರಗತಿಗೆ ದಾಖಲಾತಿ ಬಯಸಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯು 2026ರ ಫೆಬ್ರವರಿ 0
ಫೆ.07ರಂದು ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ


ಚಿತ್ರದುರ್ಗ, 20 ಜನವರಿ (ಹಿ.ಸ.) :

ಆ್ಯಂಕರ್ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ ಪಿಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯ 2026-27ನೇ ಸಾಲಿನ 9 ಮತ್ತು 11ನೇ ತರಗತಿಗೆ ದಾಖಲಾತಿ ಬಯಸಿ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಪ್ರವೇಶ ಪರೀಕ್ಷೆಯು 2026ರ ಫೆಬ್ರವರಿ 07ರಂದು ಹಿರಿಯೂರು ತಾಲ್ಲೂಕಿನಲ್ಲಿ ಈಗಾಗಲೇ ನಿಗದಿಪಡಿಸಿರುವ ಕೇಂದ್ರಗಳಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು https://www.navodaya.gov.in/nvs/en/Home1/ ವೆಬ್‍ಸೈಟ್‍ನಿಂದ ತಮ್ಮ ಮಕ್ಕಳ ಅರ್ಜಿಯ ರಿಜಿಸ್ಟರ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande