
ಗದಗ, 20 ಜನವರಿ (ಹಿ.ಸ.) :
ಆ್ಯಂಕರ್ : ಗದಗ ನಗರದ ಅಬ್ದುಲ್ ಕಲಾಂ ಸಮುದಾಯ ಭವನದ ಹತ್ತಿರ ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಅಲ್ಪಸಂಖ್ಯಾತರ ಇಲಾಖೆಯಡಿಯಲ್ಲಿ ಅಂದಾಜು ಮೊತ್ತ 1209ಲಕ್ಷ ರೂ ಗಳ ಅನುದಾನದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತರ ಸಾಮಾನ್ಯ ವಿದ್ಯಾರ್ಥಿ ನಿಲಯಡಾ ನೂತನ ಕಟ್ಟಡವನ್ನು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವರಾದ ಬಿ.ಝಡ್. ಜಮೀರ ಅಹ್ಮದ್ ಖಾನ್ ಹಾಗೂ ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ. ಪಾಟೀಲ ಅವರು ಉದ್ಘಾಟಿಸಿದರು.
ಈ ಸಂಧರ್ಭದಲ್ಲಿ ಶಾಸಕ ಜಿ ಎಸ್ ಪಾಟೀಲ , ಗದಗ–ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ಎಸ್.ಎನ್. ಬಳ್ಳಾರಿ, ಅಶೋಕ ಮಂದಾಲಿ, ಪಾರುಕ್ ಹುಬ್ಬಳ್ಳಿ, ಎ.ಎಂ. ಹಿಂಡಸಗೇರಿ, ಬಸವರಾಜ್, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಇತರರ ಇದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP