
ವಿಜಯಪುರ, 20 ಜನವರಿ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕುಮಠೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಗೋದಾಮು ಮತ್ತು ಎನ್.ಆರ್.ಎಲ್.ಎಂ ಶೆಡ್ ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧನಾಗಿದ್ದೇನೆ. ಮುಂದೆಯೂ ಗ್ರಾ. ಪಂ. ಸದಸ್ಯರ ಪರ ಧ್ವನಿ ಎತ್ತುತ್ತೇನೆ. ಕೇರಳ ಮಾದರಿಯಲ್ಲಿ ಸದಸ್ಯರಿಗೆ ಸೌಲಭ್ಯ ಒದಗಿಸಲು ಮುಂದೆಯೂ ಧ್ವನಿ ಎತ್ತುತ್ತೇನೆ ಎಂದು ಅವರು ಹೇಳಿದರು.
ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಗ್ರಾ. ಪಂ. ಸದಸ್ಯರು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಗ್ರಾಮ ಸ್ವರಾಜ್ಯ ಕನಸು ನನಸಾಗಲು ಮಾದರಿ ಕೆಲಸ ಮಾಡಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಮತ್ತು ಪಿ.ಕೆ.ಪಿ.ಎಸ್ ಅಧ್ಯಕ್ಷ ಸಂಗಪ್ಪ ಗು. ಮಮದಾಪುರ, ಉಪಾಧ್ಯಕ್ಷೆ ಸಾಂಯವ್ವ ಯ. ಹಿರೇಕುರಬರ, ಮುಖಂಡ ಮಹೇಶಗೌಡ ಪಾಟೀಲ, ಬಬಲೇಶ್ವರ ತಾ. ಪಂ. ಇಓ ಜುಬೇರ ಅಹ್ಮದ್ ಪಠಾಣ, ಪಿಡಿಓ ಅಶೋಕ ಸಿ. ಕೋಟ್ಯಾಳ, ಗ್ರಾ. ಪಂ. ಸದಸ್ಯರು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande