
ಬಳ್ಳಾರಿ, 20 ಜನವರಿ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೆÇಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಜ.21 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ‘ಅಕ್ಕ ಪಡೆ ಯೋಜನೆ’ ಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಉದ್ಘಾಟಿಸುವರು. ಜಿಲ್ಲಾ ಪೆÇಲೀಸ್ ಅಧೀಕ್ಷಕರಾದ ಡಾ.ಸುಮನ್ ಡಿ ಪೆನ್ನೇಕರ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್ ಹೊಸಮನೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕೆ.ಪಿ ರವಿ ಕುಮಾರ್ (ಮಕ್ಕಳ ವಿಶೇಷ ಘಟಕದ ನೋಡೆಲ್ ಅಧಿಕಾರಿ), ನವೀನ್ ಕುಮಾರ್.ಎನ್., ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಶೇಕ್ ಸಾಬ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಬಿ.ಉಮಾದೇವಿ, ಪದವಿ ಪೂರ್ವ ಶಿಕ್ಷಣಾ ಇಲಾಖೆಯ ಉಪನಿರ್ದೇಶಕ ಲಕ್ಷ್ಮಣ್ ಹಳ್ಳದಮನೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ.ಕೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದಪ್ಪ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸುಭದ್ರ ದೇವಿ, ಮಹಿಳಾ ಪೆÇಲೀಸ್ ಠಾಣೆಯ ಆರಕ್ಷಕ ಉಪ ನೀರಿಕ್ಷಕ ರಮೇಶ್ ಕುಲಕರ್ಣಿ, ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ.ಎಂ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್