
ಬೆಂಗಳೂರು, 20 ಜನವರಿ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ದಕ್ಷಿಣ ಭಾರತ ಸಮಾಜವಾದಿಗಳ ಸಮ್ಮೇಳನವನ್ನು ಉದ್ಘಾಟಿಸಿದರು.
ಸಮಾಜವಾದಿ ಅಧ್ಯಯನ ಕೇಂದ್ರ ಮತ್ತು ಸಮಾಜವಾದಿ ಸಮಾಗಮ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್.ಪಾಟೀಲ್, ಹಿರಿಯ ಸಮಾಜವಾದಿ ಚಿಂತಕ ಹಾಗೂ ಮಾಜಿ ಹಣಕಾಸು ಸಚಿವರಾದ ಕೇರಳ ರಾಜ್ಯದ ಐಸಾಕ್ ಥಾಮಸ್, ತೆಲಂಗಾಣ ಶಾಸಕರಾದ ವಂಶಿಕೃಷ್ಣ, ಮಾಜಿ ಸಂಸದರಾದ ಥಂಪನ್ ಥಾಮಸ್, ಕಾರ್ಮಿಕ ಮುಖಂಡರಾದ ಗೀತಾ ರಾಮಕೃಷ್ಣನ್, ಮಾಜಿ ಸಂಸದರಾದ ಎಲ್.ಹನುಮಂತಯ್ಯ, ಸಮಾಜವಾದಿ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಸುಂದರ್ ಅವರುಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa