ದೌರ್ಜನ್ಯ ತಡೆಗೆ ಕಟ್ಟುನಿಟ್ಟಿನ ಕ್ರಮ : ಡಾ.ಮೂರ್ತಿ ಎಲ್
ದಾವಣಗೆರೆ, 20 ಜನವರಿ (ಹಿ.ಸ.) : ಆ್ಯಂಕರ್ : ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಆಯೋಗವು ಶೋಷಿತ ಸಮುದಾಯಗಳ ಹಿತರಕ್ಷಣೆ ಮತ್ತು ದೌರ್ಜನ್ಯ ತಡೆಗೆ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಹೇಳಿದರು. ದಾವಣಗೆರೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸಿದ ಬಳ
Meeting


ದಾವಣಗೆರೆ, 20 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಪಂಗಡಗಳ ಆಯೋಗವು ಶೋಷಿತ ಸಮುದಾಯಗಳ ಹಿತರಕ್ಷಣೆ ಮತ್ತು ದೌರ್ಜನ್ಯ ತಡೆಗೆ ಬದ್ಧವಾಗಿದೆ ಎಂದು ಆಯೋಗದ ಅಧ್ಯಕ್ಷ ಡಾ. ಮೂರ್ತಿ ಎಲ್. ಹೇಳಿದರು.

ದಾವಣಗೆರೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರವಾಸ ನಡೆಸಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಆಯೋಗಕ್ಕೆ ಬಂದ 3,688 ಪ್ರಕರಣಗಳಲ್ಲಿ 208 ಪ್ರಕರಣಗಳನ್ನು ಈಗಾಗಲೇ ಇತ್ಯರ್ಥಪಡಿಸಲಾಗಿದೆ. 31 ಜಿಲ್ಲೆಗಳ ಪೈಕಿ ಇದುವರೆಗೆ 7 ಜಿಲ್ಲೆಗಳ ಪ್ರವಾಸ ಪೂರ್ಣಗೊಂಡಿದ್ದು, ಮುಂದಿನ ಎರಡು ತಿಂಗಳಲ್ಲಿ ಇನ್ನೂ 12 ಜಿಲ್ಲೆಗಳ ಪ್ರವಾಸ ಕೈಗೊಳ್ಳಲಾಗುವುದು ಎಂದರು.

ದೌರ್ಜನ್ಯ, ಪಿಟಿಸಿಎಲ್ ಕಾಯ್ದೆ ಅಡಿ ಜಮೀನು ವಿವಾದಗಳು ಹಾಗೂ ವಸತಿ ನಿಲಯಗಳ ಅವ್ಯವಸ್ಥೆ ಕುರಿತು ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಎಸ್‌ಸಿಪಿ/ಟಿಎಸ್‌ಪಿ ಅನುದಾನವನ್ನು ಸಮುದಾಯದ ಅಭಿವೃದ್ಧಿಗೆ ಮಾತ್ರ ಬಳಸಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande