ಜ.23 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‍ವ್ಯೂವ್
ಕೊಪ್ಪಳ, 20 ಜನವರಿ (ಹಿ.ಸ.) : ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜನವರಿ 23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ವಾಕ್ ಇನ್ ಇಂಟರ್‍ವ್ಯೂವ್ ಅನ್ನು ಆಯೋಜಿಸಲಾಗಿದೆ. ಪಿ.ಯು.ಸಿ., ಐಟಿಐ(ಯಾವುದೇ ವೃತ್ತಿ), ಡಿಪ್ಲೊಮಾ ಮೆಕ್ಯಾನಿಕಲ್, ಡಿಪ್ಲೊಮಾ ಎಲೆಕ್ಟ್ರಿಕಲ
ಜ.23 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‍ವ್ಯೂವ್


ಕೊಪ್ಪಳ, 20 ಜನವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜನವರಿ 23 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ವಾಕ್ ಇನ್ ಇಂಟರ್‍ವ್ಯೂವ್ ಅನ್ನು ಆಯೋಜಿಸಲಾಗಿದೆ.

ಪಿ.ಯು.ಸಿ., ಐಟಿಐ(ಯಾವುದೇ ವೃತ್ತಿ), ಡಿಪ್ಲೊಮಾ ಮೆಕ್ಯಾನಿಕಲ್, ಡಿಪ್ಲೊಮಾ ಎಲೆಕ್ಟ್ರಿಕಲ್, ಇತರೆ ಪದವಿ ವಿದ್ಯಾರ್ಹತೆ ಹೊಂದಿದ 18 ರಿಂದ 30 ವರ್ಷದೊಳಗಿನ ನಿರುದ್ಯೋಗಿ ಪುರಷರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಸುಮ್) ಹಾಗೂ ಪಾಸ್‍ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‍ವ್ಯೂವ್‍ನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.

ಉದ್ಯೋಗಾಕಾಂಕ್ಷಿಗಳು https://forms.gle/JUms1oPocRNQufRo7 ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande