ಗ್ರಾಮ ಪಂಚಾಯಿತಿ : ಆಡಳಿತಾಧಿಕಾರಿ ನೇಮಕಕ್ಕೆ ವಿರೋಧ
ಬಳ್ಳಾರಿ, 20 ಜನವರಿ (ಹಿ.ಸ.) : ಆ್ಯಂಕರ್ : ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡದೇ ಹಾಲಿ ಸದಸ್ಯರನ್ನೇ ಅಧಿಕಾರದಲ್ಲಿ ಮುಂದುವರೆಸಲು ಆಗ್ರಿಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಯಿತಿ ಸದಸ್ಯರ ಮಹಾ ಒಕ್ಕೂಟವು ಆಗ್ರಹಿಸಿದೆ. ಕರ್ನಾಟಕ ರಾಜ್ಯ ಗ್ರಾಮ ಪಂಚಯಿತಿ ಸದಸ್ಯರ
ಗ್ರಾಮ ಪಂಚಾಯಿತಿ : ಆಡಳಿತಾಧಿಕಾರಿ ನೇಮಕಕ್ಕೆ ವಿರೋಧ


ಗ್ರಾಮ ಪಂಚಾಯಿತಿ : ಆಡಳಿತಾಧಿಕಾರಿ ನೇಮಕಕ್ಕೆ ವಿರೋಧ


ಬಳ್ಳಾರಿ, 20 ಜನವರಿ (ಹಿ.ಸ.) :

ಆ್ಯಂಕರ್ : ಅವಧಿ ಮುಗಿದ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡದೇ ಹಾಲಿ ಸದಸ್ಯರನ್ನೇ ಅಧಿಕಾರದಲ್ಲಿ ಮುಂದುವರೆಸಲು ಆಗ್ರಿಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಯಿತಿ ಸದಸ್ಯರ ಮಹಾ ಒಕ್ಕೂಟವು ಆಗ್ರಹಿಸಿದೆ.

ಕರ್ನಾಟಕ ರಾಜ್ಯ ಗ್ರಾಮ ಪಂಚಯಿತಿ ಸದಸ್ಯರ ಮಹಾ ಒಕ್ಕೂಟದ ಬಳ್ಳಾರಿ ಜಿಲ್ಲಾ ಅಧ್ಯಕ್ಷರಾಗಿರುವ ಬಾಣಾಪುರದ ನಾಗರಾಜ್ ಅವರು, 2021ರಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆದಿದ್ದು, 2026-27ರ ಮಧ್ಯದಲ್ಲಿ ಬಳ್ಳಾರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಅವಧಿ ಮುಗಿಯಲಿದೆ ಎಂದರು.

ಆದರೆ, 2020 ರಲ್ಲಿ ಬಿಜೆಪಿ ಸರ್ಕಾರವು ಅಧಿಕಾರ ಪೂರ್ಣಗೊಂಡ ಗ್ರಾಮ ಪಂಚಾಯಿತಿಗಳ ಅಧಿಕಾವರಧಿಯನ್ನು ಆರು ತಿಂಗಳಿಗೆ ವಿಸ್ತರಿಸಿತ್ತು. ಆದರೆ, ಈಗ ಗ್ರಾಮ ಪಂಚಾಯಿತಿಗಳ ಅಧಿಕಾರ ಪೂರ್ಣಗೊಳ್ಳಲಿದೆ ಎಂಬ ಕಾರಣ ನೀಡಿ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡುತ್ತಿರುವುದು ಸಂವಿಧಾನ ವಿರೋಧಿ. ಸರ್ಕಾರ ಈ ಕುರಿತು ಬುಧವಾರ ಸಭೆಯನ್ನು ಏರ್ಪಡಿಸಿದ್ದು, ಗ್ರಾಮ ಪಂಚಾಯಿತಿಯ ಸದಸ್ಯರ ಪರವಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಎ. ಶ್ರೀಧರ್, ಯು. ಗಣೇಶ್, ಲಕ್ಷ್ಮೀರೆಡ್ಡಿ, ಹೇಮಾ ಮಂಜುನಾಥ ಅವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande