ತಪಾಸಣೆ ಮತ್ತು ಚಿಕಿತ್ಸೆಯಿಂದ ಸ್ತನ ಕ್ಯಾನ್ಸರ್ ತಡೆಯಬಹುದು : ಡಾ.ಸೈಯದ್ ನಾಸೀರ್ ಹುಸೇನ್
ಬಳ್ಳಾರಿ, 20 ಜನವರಿ (ಹಿ.ಸ.) : ಆ್ಯಂಕರ್ : ನಿಯಮಿತ ತಪಾಸಣೆ ಮತ್ತು ಆರಂಭಿಕ ಚಿಕಿತ್ಸೆಯಿಂದ ಸ್ತನ ಕ್ಯಾನ್ಸರ್ ಅನ್ನು ತಡೆಗಟ್ಟಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರು ತಿಳಿಸಿದ್ದಾರೆ. ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ನಡೆದ
ಡಾ.ಸೈಯದ್ ನಾಸೀರ್ ಹುಸೇನ್


ಡಾ.ಸೈಯದ್ ನಾಸೀರ್ ಹುಸೇನ್


ಡಾ.ಸೈಯದ್ ನಾಸೀರ್ ಹುಸೇನ್


ಬಳ್ಳಾರಿ, 20 ಜನವರಿ (ಹಿ.ಸ.) :

ಆ್ಯಂಕರ್ : ನಿಯಮಿತ ತಪಾಸಣೆ ಮತ್ತು ಆರಂಭಿಕ ಚಿಕಿತ್ಸೆಯಿಂದ ಸ್ತನ ಕ್ಯಾನ್ಸರ್ ಅನ್ನು ತಡೆಗಟ್ಟಬಹುದಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರು ತಿಳಿಸಿದ್ದಾರೆ.

ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಮಂಗಳವಾರ ನಡೆದ ‘ಸ್ವಸ್ಥ ಸೇತು’ ಆರೋಗ್ಯ ಸೇತುವೆಯಡಿ ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆಯ 2025-26 ನೇ ಸಾಲಿನ ವಾರ್ಷಿಕ ಮೌಲ್ಯಮಾಪನ ವರದಿಯ ಯೋಜನೆಯ ಹಸ್ತಾಂತರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

`ಹುಮನ ಪೀಪಲ್ ಟು ಪೀಪಲ್ ಇಂಡಿಯಾ ಸಂಸ್ಥೆ’ ಮತ್ತು `ಇಂಡಸ್ ಸೇತು’ ಸಂಸ್ಥೆ ವತಿಯಿಂದ ಬಳ್ಳಾರಿ ಜಿಲ್ಲೆಯಲ್ಲಿ 2025ರ ಫೆಬ್ರವರಿ ಯಿಂದ ಡಿಸೆಂಬರ್ ಅವಧಿಯಲ್ಲಿ ‘ಸ್ವಸ್ಥ ಸೇತು - ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯಡಿ ಜಿಲ್ಲೆಯಲ್ಲಿ ಸುಮಾರು 537 ಆಶಾ ಕಾರ್ಯಕರ್ತೆಯರಿಗೆ ಸಮುದಾಯಗಳಲ್ಲಿ ತಪಾಸಣೆ ನಡೆಸುವ ತರಬೇತಿ ನೀಡಲಾಗಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ 1,50,000 ಮಹಿಳೆಯರನ್ನು ತಪಾಸಣೆಗೆ ಒಳಪಡಿಸಲಾಗಿದ್ದು, ಇದರಲ್ಲಿ 42 ಮಹಿಳೆಯರು ಅನುಮಾನಾಸ್ಪದ ಲಕ್ಷಣಗಳನ್ನು ಹೊಂದಿರುವದನ್ನು ಗುರುತಿಸಲಾಗಿದೆ. 35 ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಖಚಿತವಾಗಿದೆ. 15 ಜನ ಮಹಿಳೆಯರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 20 ಜನ ಮಹಿಳೆಯರಿಗೂ ಚಿಕಿತ್ಸೆ ನೀಡಲಾಗುವುದು ಎಂದರು.

ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು, ಹೆಣ್ಣಿನಿಂದಲೇ ಒಂದು ಕುಟುಂಬ ನಿರ್ವಹಣೆ ಸಾಧ್ಯ. ಹೆಣ್ಣಿನ ಆರೋಗ್ಯ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಕ್ಯಾನ್ಸರ್ ತಡೆ ಹಾಗೂ ಆರಂಭದ ಹಂತದಲ್ಲೇ ಕಾಯಿಲೆ ಪತ್ತೆ ಹಚ್ಚುವಿಕೆ ಕುರಿತಂತೆ ಅರಿವು ಹೆಚ್ಚಿಸುವುದು ಮುಖ್ಯವಾಗಿದ್ದು, ಆರಂಭದಲ್ಲೇ ಕಾಯಿಲೆ ಪತ್ತೆ ಹಚ್ಚುವ ವಿಧಾನಗಳ ಬಗ್ಗೆ ಅರಿವು ಮೂಡಿಸುವುದು ತುರ್ತು ಅಗತ್ಯವಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು, ಸ್ತನ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣೆ ಕಾರ್ಯವು ಜಿಲ್ಲೆಯ ಎರಡು ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಿದೆ. 16 ಪ್ರಾಥಮಿಕ ಆರೋಗ್ಯ ಕೇಂದ್ರ, 3 ಸಮುದಾಯ ಆರೋಗ್ಯ ಮತ್ತು 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿದೆ ಎಂದರು.

ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ, ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ, ಬಿಎಂಸಿಆರ್‍ಸಿ ನಿರ್ದೇಶಕ ಡಾ. ಗಂಗಾಧರ ಗೌಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಲ್ಲಾ ರಮೇಶ್ ಬಾಬು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ನವದೆಹಲಿಯ ಎಚ್‍ಪಿಪಿಐ ಆರೋಗ್ಯ ಕಾರ್ಯಕ್ರಮಗಳ ಸಂಯೋಜಕ ಸುಬ್ರತ್ ಮೊಹಂತಿ, ನ್ಯಾಷನಲ್ ಪೋಗ್ರಾಂ ಮ್ಯಾನೇಜರ್ ನತ್ತು ಸಿಂಗ್, ಏರೋಇನ್ಫ್ರಾಸ್ಟ್ರಾಟ್ಜಿಕ್ಸ್ ಸಂಸ್ಥಾಪಕರು ಹಾಗೂ ವ್ಯವಸ್ಥಾಪಕ ಪಾಲುದಾರರಾದ ಮೆಹನಾಜ್ ಅನ್ಸಾರಿ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಆಶಾಕಾರ್ಯಕರ್ತೆಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande