ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದ ; ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ
ನವದೆಹಲಿ, 21 ಜನವರಿ (ಹಿ.ಸ.) : ಆ್ಯಂಕರ್ : ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರವು ಸುಮಾರು 22 ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳಲಿದ್ದು, ಈ ಪ್ರಕರಣದ ಬಗ್ಗೆ ಎರಡು ರಾಜ್ಯಗಳಲ್ಲಿಯೂ ತೀವ್ರ ಕುತೂ
SC


ನವದೆಹಲಿ, 21 ಜನವರಿ (ಹಿ.ಸ.) :

ಆ್ಯಂಕರ್ : ಕರ್ನಾಟಕ–ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರವು ಸುಮಾರು 22 ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಳ್ಳಲಿದ್ದು, ಈ ಪ್ರಕರಣದ ಬಗ್ಗೆ ಎರಡು ರಾಜ್ಯಗಳಲ್ಲಿಯೂ ತೀವ್ರ ಕುತೂಹಲ ಮೂಡಿದೆ.

ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರಗಳು, ಪಟ್ಟಣಗಳು ಹಾಗೂ ಗ್ರಾಮಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಬೇಕೋ ಅಥವಾ ತಿರಸ್ಕರಿಸಬೇಕೋ ಎಂಬ ಕುರಿತು ಸುಪ್ರೀಂ ಕೋರ್ಟ್ ಇಂದು ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ. ಸುಮಾರು 25 ವರ್ಷಗಳ ಹಿಂದೆ ಸಲ್ಲಿಸಲಾದ ಈ ಅರ್ಜಿಯ ಪ್ರಾಥಮಿಕ ವಿಚಾರಣೆ ಇಂದು ನ್ಯಾಯಾಲಯದಲ್ಲಿ ನಡೆಯಲಿದೆ.

ಈ ಕಾನೂನು ಹೋರಾಟಕ್ಕೆ ಕರ್ನಾಟಕ ಸರ್ಕಾರ ಸಂಪೂರ್ಣ ಸನ್ನದ್ಧವಾಗಿದ್ದು, ಮಹಾರಾಷ್ಟ್ರದ ಬೇಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಲು ರಾಜ್ಯದ ಕಾನೂನು ತಂಡ ಸಜ್ಜಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಪರ ವಕಾಲತ್ತನ್ನು ನ್ಯಾಯವಾದಿ ನಿಶಾಂತ ಪಾಟೀಲ ವಹಿಸಲಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸದೇ ತಿರಸ್ಕರಿಸಬೇಕೆಂಬ ದಿಟ್ಟ ವಾದವನ್ನು ಕರ್ನಾಟಕ ಮಂಡಿಸುವ ಸಾಧ್ಯತೆ ಇದೆ.

ಗಡಿ ವಿವಾದ ಅರ್ಜಿ ವಿಚಾರಣೆಗೆ ದಿನ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಎಚ್ಚರ ವಹಿಸಿದ್ದಾರೆ , ಮರಾಠಿ ಭಾಷಿಕರು ಹೆಚ್ಚಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಗಡಿ ಭಾಗಗಳಲ್ಲಿ ಹೆಚ್ಚುವರಿ ಪೊಲೀಸ್ ನಿಯೋಜನೆಗೂ ನಗರ ಹಾಗೂ ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande