ಬೆಂಗಳೂರಿಗೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಆಗಮನ
ಹಲವಾರು
Vp


ಬೆಂಗಳೂರು, 21 ಜನವರಿ (ಹಿ.ಸ.) :

ಆ್ಯಂಕರ್ : ರಾಜ್ಯದ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ತುಮಕೂರಿನ ಸಿದ್ದಗಂಗಾ ಮಠದ ತ್ರಿವಿಧ ದಾರೋಹಿ, ಪರಮಪೂಜ್ಯ ಡಾ. ಶಿವಕುಮಾರ ಮಹಾಯೋಗಿಗಳ ಲಿಂಗೈಕ್ಯಕ್ಕೆ ಏಳು ವರ್ಷಗಳು ಪೂರೈಸಿದ ಹಿನ್ನೆಲೆ ಆಯೋಜಿಸಲಾದ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಹಾಗೂ ಬೆಂಗಳೂರಿನ CMR ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ಉಪರಾಷ್ಟ್ರಪತಿಗಳು ರಾಜ್ಯಕ್ಕೆ ಭೇಟಿ ನೀಡಿದರು.

ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿಗಳನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಂತರ ಉಪರಾಷ್ಟ್ರಪತಿಗಳು ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ತುಮಕೂರಿನ ಸಿದ್ದಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande