ನೋಟಿಸ್ ಹಿಂಪಡೆಯದಿದ್ದರೆ ನ್ಯಾಯಾಂಗ ನಿಂದನೆ ಮೊಕದ್ದಮೆ : ಸ್ವಾಮಿ ಅವಿಮುಕ್ತೇಶ್ವರಾನಂದ ವಕೀಲರ ಎಚ್ಚರಿಕೆ
ಪ್ರಯಾಗ್‌ರಾಜ್, 21 ಜನವರಿ (ಹಿ.ಸ.) : ಆ್ಯಂಕರ್ : ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜ್ ಹಾಗೂ ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರದ ನಡುವಿನ ವಿವಾದ ತೀವ್ರಗೊಳ್ಳುತ್ತಿರುವ ಸೂಚನೆಗಳು ಕಾಣುತ್ತಿವೆ. ಮಂಗಳವಾರ ತಡರಾತ್ರಿ, ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜರ ಪರ ಸುಪ್ರೀಂ ಕೋರ್ಟ್‌ನಲ್ಲಿ ವಕಾಲತ್ತು ವ
Notice


ಪ್ರಯಾಗ್‌ರಾಜ್, 21 ಜನವರಿ (ಹಿ.ಸ.) :

ಆ್ಯಂಕರ್ : ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜ್ ಹಾಗೂ ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರದ ನಡುವಿನ ವಿವಾದ ತೀವ್ರಗೊಳ್ಳುತ್ತಿರುವ ಸೂಚನೆಗಳು ಕಾಣುತ್ತಿವೆ. ಮಂಗಳವಾರ ತಡರಾತ್ರಿ, ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜರ ಪರ ಸುಪ್ರೀಂ ಕೋರ್ಟ್‌ನಲ್ಲಿ ವಕಾಲತ್ತು ವಹಿಸಿರುವ ವಕೀಲರು ಮೇಳ ಪ್ರಾಧಿಕಾರಕ್ಕೆ ಕಠಿಣ ಎಚ್ಚರಿಕೆಯ ನೋಟಿಸ್ ಪ್ರತಿಕ್ರಿಯೆಯನ್ನು ಇಮೇಲ್ ಮೂಲಕ ರವಾನಿಸಿದ್ದಾರೆ.

ಶಿಬಿರದ ಆವರಣದಲ್ಲಿ ಅಂಟಿಸಲಾದ ನೋಟಿಸ್ ಅನ್ನು ತಕ್ಷಣವೇ ಹಿಂಪಡೆಯದಿದ್ದಲ್ಲಿ, ಪ್ರಯಾಗ್‌ರಾಜ್ ಮೇಳ ಪ್ರಾಧಿಕಾರವನ್ನು ಸುಪ್ರೀಂ ಕೋರ್ಟ್‌ನ ನ್ಯಾಯಾಂಗ ನಿಂದನೆಗೆ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಪ್ರತಿಕ್ರಿಯೆಯಲ್ಲಿ ಸ್ಪಷ್ಟವಾಗಿ ಎಚ್ಚರಿಸಲಾಗಿದೆ. ಈ ಕುರಿತು ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜರ ಮಾಧ್ಯಮ ಉಸ್ತುವಾರಿ ಶೈಲೇಂದ್ರ ಯೋಗಿ ಸರ್ಕಾರ್ ಮಾಹಿತಿ ನೀಡಿದ್ದಾರೆ.

ನವೆಂಬರ್ 19ರಂದು ಮೇಳ ಪ್ರಾಧಿಕಾರ ಜಾರಿಗೊಳಿಸಿದ್ದ ನೋಟಿಸ್‌ಗೆ ಸಂಬಂಧಿಸಿ, ಸ್ವಾಮೀಜಿಯವರ ಸುಪ್ರೀಂ ಕೋರ್ಟ್ ವಕೀಲರು ಅಧಿಕೃತ ಉತ್ತರ ಕಳುಹಿಸಿದ್ದಾರೆ. 24 ಗಂಟೆಗಳೊಳಗೆ ನೋಟಿಸ್ ಹಿಂಪಡೆಯಲು ವಿಫಲವಾದಲ್ಲಿ, ಪ್ರಾಧಿಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಮೇಳ ಪ್ರಾಧಿಕಾರ ಕೈಗೊಂಡ ಕ್ರಮಗಳಿಂದ ಸಾರ್ವಜನಿಕ ವಲಯದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಮಹಾರಾಜರ ಪ್ರತಿಷ್ಠೆಗೆ ಧಕ್ಕೆ ಉಂಟಾಗಿದೆ ಎಂದು ವಕೀಲರು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಪ್ರಾಧಿಕಾರದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುವುದಕ್ಕೂ ತಯಾರಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande