
ಕೊಪ್ಪಳ, 21 ಜನವರಿ (ಹಿ.ಸ.) :
ಆ್ಯಂಕರ್ : ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಜನವರಿ ಮಾಹೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಆಚರಿಸುತ್ತಿದ್ದು, ಇದರ ಅಂಗವಾಗಿ ಜನವರಿ 23 ರಂದು ಬೆಳಿಗ್ಗೆ 7.30 ಗಂಟೆಗೆ ನಗರದ ಅಶೋಕ ವೃತ್ತದಿಂದ ಶ್ರೀ ಗವಿಸಿದ್ದೇಶ್ವರ ಮಠದವರೆಗೆ ರಸ್ತೆ ಸುರಕ್ಷತಾ ಜಾಥಾ ಹಮ್ಮಿಕೊಳ್ಳಲಾಗಿದೆ.
ಜಾಥಾದಲ್ಲಿ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸ್ಕೌಟ್ಸ್-ಗೈಡ್ಸ್ ಮಕ್ಕಳು ಭಾಗವಹಿಸಲಿದ್ದಾರೆ. ಈ ಜಾಥಾದಲ್ಲಿ ಸಾರ್ವಜನಿಕರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್