
ತುಮಕೂರು, 21 ಜನವರಿ (ಹಿ.ಸ.) :
ಆ್ಯಂಕರ್ : ತುಮಕೂರಿನ ಸಿದ್ದಗಂಗಾ ಮಠದಲ್ಲಿ ಪದ್ಮಭೂಷಣ, ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ಪರಮಪೂಜ್ಯ ಡಾ|| ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವು ಇಂದು ಭಕ್ತಿಭಾವದಿಂದ ಜರುಗಿತು.
ಈ ಪುಣ್ಯ ಸಂಸ್ಮರಣೋತ್ಸವದಲ್ಲಿ ಉಪರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್, ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ , ಗೃಹ ಸಚಿವರಾದ ಡಾ, ಜಿ. ಪರಮೇಶ್ವರ್ , ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಟಿ.ಬಿ. ಜಯಚಂದ್ರ , ಸಂಸದರಾದ ಗೋವಿಂದ ಕಾರಜೋಳ ಹಾಗೂ ಡಾ. ಸಿ.ಎನ್. ಮಂಜುನಾಥ್ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮವು ಸಿದ್ದಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿಗಳ ಅಧ್ಯಕ್ಷತೆಯಲ್ಲಿ, ಶ್ರೀ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿಗಳು ಹಾಗೂ ಪರಮಪೂಜ್ಯ ಸದ್ಗುರು ಶ್ರೀ ಮಧುಸೂದನ ಸಾಯಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು.
ಪುಣ್ಯ ಸಂಸ್ಮರಣೋತ್ಸವದ ಅಂಗವಾಗಿ ವಿಶೇಷ ಪೂಜೆ, ಪ್ರವಚನಗಳು ಹಾಗೂ ಶಿವಕುಮಾರ ಮಹಾಸ್ವಾಮೀಜಿಗಳ ಜೀವನ-ಸಾಧನೆಗಳ ಸ್ಮರಣೆ ನಡೆಯಿತು. ಮಹಾಸ್ವಾಮೀಜಿಗಳ ತ್ಯಾಗ, ಸೇವೆ ಮತ್ತು ಮಾನವೀಯ ಮೌಲ್ಯಗಳು ಮುಂದಿನ ಪೀಳಿಗೆಗೂ ಮಾರ್ಗದರ್ಶಿಯಾಗಲಿ ಎಂಬ ಸಂದೇಶ ಕಾರ್ಯಕ್ರಮದಲ್ಲಿ ಮೂಡಿಬಂತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa