
ತುಮಕೂರು, 21 ಜನವರಿ (ಹಿ.ಸ.) :
ಆ್ಯಂಕರ್ : ತುಮಕೂರಿನ ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಮಹಾಯೋಗಿಗಳ ಲಿಂಗೈಕ್ಯರಾಗಿ ಏಳು ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಶ್ರೀಸಿದ್ದಗಂಗಾ ಮಠದಲ್ಲಿ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಭಾಗವಹಿಸಲಿದ್ದಾರೆ. ಬೆಳಗ್ಗೆ 10:50ಕ್ಕೆ ಮಠಕ್ಕೆ ಆಗಮಿಸಲಿರುವ ಉಪರಾಷ್ಟ್ರಪತಿಗಳು, ಮೊದಲು ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಬೆಳಗ್ಗೆ 11 ಗಂಟೆಗೆ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಉಪರಾಷ್ಟ್ರಪತಿಗಳೊಂದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ ಸಹ ಉಪಸ್ಥಿತರಿರಲಿದ್ದಾರೆ.
ಉಪರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa