
ಕೊಪ್ಪಳ, 03 ಜನವರಿ (ಹಿ.ಸ.) :
ಆ್ಯಂಕರ್ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2025-26ನೇ ಸಾಲಿಗೆ ಸಾಧನೆ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಹ ವಿಕಲಚೇತನರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನ ಫಲಾನುಭವಿಗಳು ಆನ್‍ಲೈನ್‍ನಲ್ಲಿ ಸೇವಾಸಿಂಧು ತಂತ್ರಾಂಶದ ಮೂಲಕ https://sevasindhuservices.karnataka.gov.in ಪೋರ್ಟ್‍ಲ್‍ನಲ್ಲಿ ಗ್ರಾಮಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ನೇರವಾಗಿಯೂ ಸಹ ಅರ್ಜಿಗಳನ್ನು ಜನವರಿ 31 ರೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ, ಕೊಠಡಿ ಸಂಖ್ಯೆ 31,32 ಜಿಯೋ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ, ಕೊಪ್ಪಳ ಈ ಕಛೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ, ಯಲಬುರ್ಗಾ, ಗಂಗಾವತಿ, ಕುಷ್ಟಗಿ, ಕುಕನೂರು ತಾಲೂಕಿನ ಎಂ.ಆರ್.ಡಬ್ಲೂಗಳಾದ ಕೊಪ್ಪಳ-ಜಯಶ್ರೀ: 9980126391, ಯಲಬುರ್ಗಾ-ಶಶಿಕಲಾ: 8147749523, ಕುಕನೂರು-ಶರಣಯ್ಯ: 9886240203, ಕುಷ್ಟಗಿ-ಚಂದ್ರಶೇಖರ: 9916308585, ಗಂಗಾವತಿ, ಕನಕಗಿರಿ, ಕಾರಟಗಿ-ಮಂಜುಳಾ: 7975398202 ಹಾಗೂ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ಹಾಗೂ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲೂಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್