ಮಾದರಿ ಜಿಲ್ಲೆಯನ್ನಾಗಿಸಲು ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಬಿ.ಎಸ್.ಪಾಟೀಲ ಸೂಚನೆ
ವಿಜಯಪುರ, 03 ಜನವರಿ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲೆಯ ಗ್ರಾಮೀಣ ರಸ್ತೆಗಳು, ಕೆರೆಗಳ ಅಭಿವೃದ್ದಿ, ಅಕ್ರಮ ಮದ್ಯ ಮಾರಾಟ ಕಡಿವಾಣದಲ್ಲಿ ಪ್ರಗತಿ ಸಾಧಿಸಲಾಗಿದ್ದು, ವಿಜಯಪುರ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ ಮಾದರಿ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಬದ್ಧ
ಲೋಕಾ


ವಿಜಯಪುರ, 03 ಜನವರಿ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲೆಯ ಗ್ರಾಮೀಣ ರಸ್ತೆಗಳು, ಕೆರೆಗಳ ಅಭಿವೃದ್ದಿ, ಅಕ್ರಮ ಮದ್ಯ ಮಾರಾಟ ಕಡಿವಾಣದಲ್ಲಿ ಪ್ರಗತಿ ಸಾಧಿಸಲಾಗಿದ್ದು, ವಿಜಯಪುರ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿಗೊಳಿಸಿ ಮಾದರಿ ಜಿಲ್ಲೆಯನ್ನಾಗಿಸಲು ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಸಂಪೂರ್ಣ ಅಭಿವೃದ್ದಿಗಾಗಿ ಮತ್ತಷ್ಟು ಯೋಜನೆಗಳನ್ನು ರೂಪಿಸಿಕೊಂಡು ಕೆರೆ, ನದಿ ಇಕ್ಕೆಲಗಳಲ್ಲಿ ಗಿಡ ಬೆಳೆಸುವ ಮೂಲಕ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಅರಣ್ಯ ಸಂರಕ್ಷಣೆ ನಮ್ಮ ಹೊಣೆಯಾಗಿದೆ. ಅರಣ್ಯೀ ಪ್ರದೇಶ ಹೆಚ್ಚಳವಾಗುವಂತೆ ನೋಡಿಕೊಳ್ಳಬೇಕು. ಟ್ರೀ ಪಾರ್ಕ್ ಯೋಜನೆ ಸಮರ್ಪಕವಾಗಿ ಅನುಷ್ಠನಗೊಳಿಸುವ ಮೂಲಕ ಹಸಿರು ಹೊದಿಕೆ ಹೆಚ್ಚಿಸುವತ್ತ ಯೋಜನೆ ರೂಪಿಸಿಕೊಂಡು ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆ ನೀಡುವ ಜವಾಬ್ದಾರಿ ನಮ್ಮೆಲ್ಲರಮೇಲಿದೆ. ಆ ನಿಟ್ಟಿನಲ್ಲಿ ಅರಣ್ಯೀಕರಣಕ್ಕೆ ಇನ್ನಷ್ಟು ಒತ್ತು ನೀಡಿ ಜಿಲ್ಲೆಯನ್ನು ಹಸಿರು ಜಿಲ್ಲೆಯನ್ನಾಗಿಸಲು ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ಸ್ವಚ್ಚತೆಗೆ ಪ್ರಥಮಾದ್ಯತೆ ನೀಡಬೇಕು, ನೈರ್ಮಲ್ಯೀಕರಣ ಮಹತ್ವ ತಿಳಿಸುವ ನಿಟ್ಟಿನಲ್ಲಿ ಜನರಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಡುವ ಮೂಲಕ ಬಳಕೆ ಕುರಿತು ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಸಂಬಂಧಿಸಿದ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವ ಕುರಿತು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನಿಗಾ ವಹಿಸಬೇಕು. ನಮ್ಮೂರು ಸ್ವಚ್ಛವಾಗಿರುವಂತಹ ಮನೋಭಾವನೆಯನ್ನು ಬೆಳೆಸಿಕೊಂಡು, ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ವಿಜಯಪುರ ಐತಿಹಾಸಿಕ ನಗರವಾಗಿದೆ. ದೇಶ-ವಿದೇಶಗಳಿಂದ ಪ್ರವಾಸಿಗರು ಇಲ್ಲಿಗೆ ಆಗಮಿಸುವ ಹಿನ್ನಲೆಯಲ್ಲಿ ಹಾಗೂ ಪ್ರವಾಸೋದ್ಯಮ ಉತ್ತೇಜನ ನೀಡುವ ದೃಷ್ಟಿಯಲ್ಲಿ ನಗರ ಸ್ಚಚ್ಛತೆಗೆ ಆದ್ಯತೆ ನೀಡಬೇಕು. ನಗರದ ಗಗನ್ ಮಹಲ್ ಕಂದಕದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರು ಕಸ ಎಸೆಯದಂತೆ ಜನರಿಗೆ ತಿಳುವಳಿಕೆ ಮೂಡಿಸಬೇಕು. ಎಲ್ಲೆಂದರಲ್ಲಿ ಕಸ ಹಾಕುವುದನ್ನು ಗಂಭೀರವಾಗಿ ಪರಿಗಣಿಸಿ, ತಿಳುವಳಿಕೆ ನೀಡಬೇಕು. ನಗರ ನೂರಕ್ಕೆ ನೂರು ಸ್ವಚ್ಛವಾಗಿಸುವ ದಿಸೆಯಲ್ಲಿ ದೂರದೃಷ್ಟಿಯಿಂದ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಮಕ್ಕಳು, ವಿದ್ಯಾರ್ಥಿಗಳಿಂದ ಶಿಕ್ಷಕರಿಂದ ಅಭಿಯಾನ ಕೈಗೊಂಡು ಜನರಲ್ಲಿ ಸ್ವಚ್ಛತೆಯ ಕುರಿತು ತಿಳುವಳಿಕೆ ಜಾಗೃತಿ ಮೂಡಿಸಬೇಕು. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಂಡು, ಕಸ ವಿಲೇವಾರಿ ಸಮರ್ಪಕವಾಗಿ ನಿರ್ವಹಣೆ ಮಾಡಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಬಸ್ ನಿಲ್ದಾಣದೊಳಗೆ ಖಾಸಗಿ ವಾಹನಗಳನ್ನು ನಿರ್ಬಂಧಿಸಬೇಕು. ಸ್ವಚ್ಛತಾ ಆಂದೋಲನವನ್ನು ನಾಳೆಯಿಂದಲೇ ಆರಂಭಿಸಿ ಪ್ರಯಾಣಿಕರಿಗೆ, ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವ ಕುರಿತು ಅರಿವು-ತಿಳುವಳಿಕೆ ಮೂಡಿಸುವಂತೆ ಅವರು ಸೂಚನೆ ನೀಡಿದರು.

ಅಧಿಕಾರಿ-ಸಿಬ್ಬಂದಿ ನಿಗದಿತ ಸಮಯಕ್ಕೆ ಕಚೇರಿಗಳಿಗೆ ಆಗಮಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಕಚೇರಿಗಳಲ್ಲಿ ಚಲನ-ವಲನ ವಹಿಗಳು, ಹಣಕಾಸಿನ ವಹಿ, ದೈನಂದಿನ ವಹಿಗಳನ್ನು ನಿರ್ವಹಿಸಬೇಕು. ಕಚೇರಿಯ ಸ್ವಚ್ಛತೆ ಕುರಿತು ಆದ್ಯತೆ ನೀಡಬೇಕು. ಕೆಲಸದಲ್ಲಿ ಪರಿಶುದ್ಧತೆ, ಪರಿಪೂರ್ಣತೆ, ಕೌಶಲ್ಯತೆಯನ್ನು ಅಳವಡಿಸಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಅನಧಿಕೃತ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಅನಧಿಕೃತವಾಗಿ ಮದ್ಯ ಮಾರಾಟ ಮಾಡುವವರ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ವಹಿಸಿ, ಅಂತಹವರ ಲೈಸನ್ಸ್ ರದ್ದುಗೊಳಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

ವಸತಿ ನಿಲಯಗಳಲ್ಲಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ವಸತಿ ನಿಲಯಗಳ ಕಟ್ಟಡಗಳ ಕಿಟಕಿಗಳಿಗೆ ಜಾಳಿಗೆ ಅಳವಡಿಸಿ, ಸೊಳ್ಳೆಗಳು ಬರದಂತೆ ನೋಡಿಕೊಳಬೇಕು. ಕೆರೆಗಳಿಗೆ ಕಲುಷಿತ ನೀರು ಪೂರೈಕೆಯಾಗದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಜಲಸಂರಕ್ಷಣೆಯ ಬಹು ದೊಡ್ಡ ಜವಾಬ್ದಾರಿಯಾಗಿದ್ದು, ಈ ದಿಸೆಯಲ್ಲಿ ಕಾರ್ಯನಿರ್ವಹಿಸುವಂತೆ ಅವರು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಹಾಗರಗಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಲಕ್ಷ್ಮಣ ನಿಂಬರಗಿ, ಬೆಳಗಾವಿ ವಲಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ, ಲೋಕಾಯುಕ್ತರ ಕಾರ್ಯದರ್ಶಿಗಳಾದ ಕೆ.ಶ್ರೀನಾಥ, ಕರ್ನಾಟಕ ಲೋಕಾಯುಕ್ತ ವಿಜಯಪುರ ಪೆÇಲೀಸ್ ಅಧೀಕ್ಷಕ ಟಿ.ಮಲ್ಲೇಶ, ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande